Tuesday, 16th January 2018  

Vijayavani

ಮಹದಾಯಿ ಉಳಿಸಿಕೊಳ್ಳಲು ಏನು ಬೇಕಾದ್ರೂ ಮಾಡ್ತೀವಿ - ಮತ್ತೆ ಕ್ಯಾತೆ ತೆಗೆದ ಪಾಲ್ಯೇಕರ್​ - ಇತ್ತ ಗೋವಾ ಸಚಿವನ ವಿರುದ್ಧ ಪಾಟೀಲ್ ಕಿಡಿ        ನನ್ನ ವಿರುದ್ಧ ಸುಳ್ಳು ಕೇಸ್​ ದಾಖಲಿಸಲು ಯತ್ನ - ಕೇಂದ್ರ ಸರ್ಕಾರದ ವಿರುದ್ಧ ತೊಗಾಡಿಯಾ ಕಿಡಿ - ಕಣ್ಣೀರಿಟ್ಟು ಅಚ್ಚರಿ ಮೂಡಿಸಿದ ಫೈರ್ ಬ್ರ್ಯಾಂಡ್​        ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದ ಮರಿ ಆನೆ - ಮರಿ ಮೇಲೆತ್ತಲು ಅರಣ್ಯ ಇಲಾಖೆ ಹರ ಸಾಹಸ - ತಮಿಳುನಾಡಿನ ರಾಯಕೋಟೆ ಬಳಿ ಘಟನೆ        ಭಾರತ ಪ್ರವಾಸದಲ್ಲಿ ಇಸ್ರೇಲ್​ ಪ್ರಧಾನಿ - ಮುಂಬೈಗೆ ಬಂದಿಳಿದ ಮುಂಬೈ ದಾಳಿ ಸಂತ್ರಸ್ತ ಮೋಶೆ - ಭಾರತಕ್ಕೆ ಬಂದಿದ್ದು ಖುಷಿ ತಂದಿದೆ ಎಂದ ಬಾಲಕ        ತಮಿಳುನಾಡಿನಲ್ಲಿ ಮುಂದುವರಿದ ಪೊಂಗಲ್ ಸಡಗರ - ಅಳಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಕಿಕ್​ - ಸಿಎಂ, ಡಿಸಿಎಂ ರಿಂದ ಕ್ರೀಡೆ ಉದ್ಘಾಟನೆ       
Breaking News :

ಮೂಡಿಗೆರೆ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌!

Monday, 08.01.2018, 4:53 PM       No Comments

ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಅನ್ಯ ಕೋಮಿನ ಯುವಕನ ಜತೆಗೆ ಸಲುಗೆಯಿಂದ ಇದ್ದು ಮೊಬೈಲ್‌ನಲ್ಲಿ ನಿತ್ಯ ಚಾಟ್‌ ಮಾಡುತ್ತಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಎರಡು ದಿನಗಳ ಹಿಂದೆ ಮೂಡಿಗೆರೆಯ ಸರ್ಕಾರಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಧನ್ಯಶ್ರೀ(20) ಎಂಬಾಕೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಳು.

ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ, 6ನೇ ತಾರೀಖು 10ಗಂಟೆಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಾಥಮಿಕ ಮಾಹಿತಿ ಪ್ರಕಾರ ಕೆಲ ಸಂಘಟನೆಗಳವರು ಆಕೆಯ ಮನೆಗೆ ಬಂದು ಮುಸ್ಲಿಂ ಹುಡುಗನ ಜತೆ ತಿರುಗಾಡುತ್ತಿದ್ದಾಳೆ. ಲವ್‌ ಜಿಹಾದ್‌ಗೆ ಆಸ್ಪದ ಕೊಡುತ್ತಿದ್ದೀರ ಎಂದು ತಾಯಿಗೆ ಬೈದಿದ್ದಾರೆ. ಇದರಿಂದ ನೊಂದು ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹುಡುಗಿ ಮತ್ತು ಹುಡುಗ ಇರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ಶೀಘ್ರವೇ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top