Tuesday, 16th October 2018  

Vijayavani

ಉಪ ಮಹಾಸಂಗ್ರಾಮದ ಅಖಾಡ ಫೈನಲ್-ಕೊನೆದಿನ ಉಗ್ರಪ್ಪ, ಶಾಂತಾ, ಮಧು ನಾಮಪತ್ರ- ಎಲೆಕ್ಷನ್ ಗೆಲ್ಲಲು ತಂತ್ರ, ಪ್ರತಿತಂತ್ರ        ರಣಕಣದಲ್ಲಿ ಆರಂಭವಾಯ್ತಾ ಜಾತಿ ಮೇಲಾಟ?-ಡಿಕೆಗೆ ಪೋಸ್ ಲೀಡರ್ ಅಂತಾ ಜಾರಕಿಹೊಳಿ ಟಾಂಗ್- ಇನ್ನೂ ಆರದ ಕೈ ದಳ್ಳುರಿ.!        ನಾಮಿನೇಷನ್ ಆಯ್ತು ಈಗ ಯುದ್ಧ ಸ್ಟಾರ್ಟ್​- ಉಪಚುನಾವಣೆಯಲ್ಲಿ ಯಾರ ಪರ ಇದೆ ಜನಮತ- ದಿಗ್ವಿಜಯ ಗ್ರೌಂಡ್​ ರಿಪೋರ್ಟ್​        ನಾಳೆ ಶಬರಿಮಲೈ ದೇವಸ್ಥಾನ ಬಾಗಿಲು ಓಪನ್- ಪ್ರವೇಶಕ್ಕೆ ಕೆಲ ನಾರಿಯರ ಕಾತರ- ಮಹಿಳಾ ಎಂಟ್ರಿ ವಿರುದ್ಧ ಭುಗಿಲೆದ್ದ ಹೋರಾಟ        ಬಿಹಾರ ಲೋಕಗುರಿ ತಲುಪಲು ನಿತೀಶ್ ಹೊಸಬಾಣ- ಪ್ರಶಾಂತ್​ ಕಿಶೋರ್​​ ಗೆ ಪಕ್ಷದಲ್ಲಿ ಜವಾಬ್ದಾರಿ        ಮೈಸೂರು ದಸರಾದಲ್ಲಿ ಮತ್ತಷ್ಟು ವೈಭವ -2000 ಬೊಂಬೆಗಳ ಪ್ರದರ್ಶನ-ಆನೆಗಳಿಗೆ ಅಂತಿಮ ತಾಲೀಮು, ಕಳೆಗಟ್ಟಿದ ಪುಷ್ಪಲೋಕ       
Breaking News

ಕಬ್ಬಿನ ಬಿಲ್ ಕೊಡಿಸಿ ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಿ

Monday, 02.07.2018, 6:07 PM       No Comments

ಬೆಳಗಾವಿ: ಗೋಕಾಕ ತಾಲೂಕಿನ ಹಿರೇನಂದಿ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ ಬಾಕಿ ಕಬ್ಬಿನ ಬಿಲ್, ವಾಹನ ಬಾಡಿಗೆ ಕೊಡಿಸಬೇಕು. ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಬೇಕು ಎಂಬ ಬೇಡಿಕೆ ಮುಂದಿರಿಸಿ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದ ರೈತರು ಜಿಲ್ಲಾಧಿಕಾರಿಗೆ ಸೋಮವಾರ ಅರ್ಜಿ ಸಲ್ಲಿಸಿದರು.

2014-15ನೇ ಸಾಲಿನ ಹಂಗಾಮಿನಲ್ಲಿ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯವರು ಕಬ್ಬು ಪೂರೈಸಿದ ರೈತರ ಲಕ್ಷಾಂತರ ರೂ.ಬಾಕಿ ಉಳಿಸಿಕೊಂಡಿದ್ದಾರೆ. ಕಬ್ಬು ಸಾಗಿಸಿದ ವಾಹನಗಳ ಬಾಡಿಗೆಯನ್ನೂ ನೀಡಿಲ್ಲ. ಇಂದು ಬನ್ನಿ, ನಾಳೆ ಬನ್ನಿ ಎನ್ನುತ್ತ ವರ್ಷದಿಂದ ಕಾರ್ಖಾನೆಗೆ ಅಲೆದಾಡಿಸುತ್ತಿದ್ದಾರೆ ಎಂದು ರೈತರು ದೂರಿದರು.

ಕಬ್ಬಿನ ಬಾಕಿ ಬಿಲ್ ಮತ್ತು ವಾಹನ ಬಾಡಿಗೆ ನೀಡುವಂತೆ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಮಾಲೀಕ ಮತ್ತು ಸಚಿವ ರಮೇಶ ಜಾರಕಿಹೊಳಿ ಅವರಿಗೆ ನಿರಂತರ ಮನವಿ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಬಾಕಿ ಹಣ ನೀಡುವುದಾಗಿ ಬರೀ ಭರವಸೆ ನೀಡುತ್ತಿದ್ದಾರೆಯೇ ಹೊರತು ಹಣ ನೀಡುತ್ತಿಲ್ಲ. ಕಾರ್ಖಾನೆ ಆಡಳಿತ ಮಂಡಳಿ ರೈತರನ್ನು ಸಂಪೂರ್ಣ ನಿರ್ಲಕ್ಷ್ಯಿಸಿದೆ. ಬಾಕಿ ಹಣ ಕೇಳಿದವರಿಗೆ ಬೆದರಿಕೆ ಹಾಕಲಾಗುತ್ತಿದೆ. ಬಾಕಿ ಕೇಳಲು ಪ್ರತಿನಿತ್ಯ ಕಾರ್ಖಾನೆಗೆ ಅಲೆದಾಡಬೇಕಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ವಾರದ ಒಳಗಾಗಿ ಕಬ್ಬಿನ ಬಾಕಿ ಬಿಲ್ ಮತ್ತು ವಾಹನ ಬಾಡಿಗೆ ಕೊಡಿಸಬೇಕು. ಇಲ್ಲದಿದ್ದರೆ ದಯಾ ಮರಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್. ಅವರಿಗೆ ಪತ್ರ ಸಲ್ಲಿಸಿದರು. ಮುಂದಿನ ಅವಘಡಗಳಿಗೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದರು.

ಗ್ರಾಮದ ರಮೇಶ ಅಕ್ಕಿ, ಉಮೇಶ ದೇಶನೂರು, ಪುಂಡಲಿಕ ಬರಬುಕರ, ಪುಂಡಲೀಕ ಇಟಗಿ, ರುದ್ರಪ್ಪ ಒರಬೂಕರ, ಮಹಾದೇವ ಬರಬೂಕ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *

Back To Top