Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಸೂಟ್​ಕೇಸ್​ ಹೇಳಿಕೆಗೆ ರೇವಣ್ಣ ಏನಂದ್ರು? ದೊಡ್ಡಗೌಡ್ರ ಮಾತೇ ಅಂತಿಮವಂತೆ

Friday, 07.07.2017, 11:07 AM       No Comments

ಮೈಸೂರು: ಜೆಡಿಎಸ್​ನಲ್ಲಿ ಸೂಟ್​ಕೇಸ್​ ಇದ್ದವರಿಗೆ ಮಾತ್ರ ಮನ್ನಣೆ ಎಂಬ ಪ್ರಜ್ವಲ್​ ರೇವಣ್ಣ ಅವರ ಹೇಳಿಕೆಗೆ ತಂದೆ ಎಚ್​.ಡಿ ರೇವಣ್ಣ ಮೈಸೂರಿನಲ್ಲಿಂದು ಪ್ರತಿಕ್ರಿಯಿಸಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ನಿನ್ನೆ ಗುರುವಾರ ಹುಣಸೂರಿನಲ್ಲಿ ಜೆಡಿಎಸ್​ ಮುಖಂಡರು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ್ದ ಪ್ರಜ್ವಲ್ ರೇವಣ್ಣ ಸೂಟ್ ಕೇಸ್ ಇದ್ದವರಿಗೆ ಮಾತ್ರ ಜೆಡಿಎಸ್​ನಲ್ಲಿ ಮನ್ನಣೆ, ನಿಷ್ಠೆಯಿಂದ ದುಡಿದವರಿಗೆ ಬೆಲೆಯಿಲ್ಲ ಎಂಬ ಹೇಳಿಕೆ ನೀಡಿ ತಮ್ಮ ಪಕ್ಷದ ವಿರುದ್ಧವೇ ಬಾಂಬ್​ ಸಿಡಿಸಿದ್ದರು. ಅಲ್ಲದೆ ಪರೋಕ್ಷವಾಗಿ ತಮ್ಮ ಚಿಕ್ಕಪ್ಪ ಎಚ್​.ಡಿ ಕುಮಾರಸ್ವಾಮಿ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲು ಬೆಟ್ಟಕ್ಕೆ ಆಗಮಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, JDSನಲ್ಲಿ ಯಾವುದೇ ರೀತಿಯ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳಿಲ್ಲ. ಹಾಗೇ ಪ್ರಜ್ಚಲ್ ನೀಡಿರುವ ಹೇಳಿಕೆಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

JDSನಲ್ಲಿ ದೇವೇಗೌಡರು ಹೇಳುವ ಮಾತೇ ಅಂತಿಮ. ಅವರ ಮಾತನ್ನು ಯಾರೂ ಮೀರುವುದಿಲ್ಲ. JDSನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನು ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿಎಸ್​ಗೆ ಸೇರ್ಪಡೆಯಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಎಚ್. ವಿಶ್ವನಾಥ್ ಅವರು ಹಿರಿಯ ರಾಜಕೀಯ ನಾಯಕರು, ಅವರ ಸೇರ್ಪಡೆಯಿಂದ ಜೆಡಿಎಸ್​ಗೆ ಮತ್ತಷ್ಟು ಬಲ ಬಂದಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿ, ಜನರ ಸಂಕಷ್ಟಗಳು ದೂರವಾಗಲಿ ಎಂದು ಚಾಮುಂಡೇಶ್ವರಿಯನ್ನು ಬೇಡಿಕೊಂಡಿದ್ದೇನೆ ಎಂದು ಹೇಳಿದ ರೇವಣ್ಣನವರು ಪತ್ನಿ ಭವಾನಿಯಿಂದ ಚಾಮುಂಡೇಶ್ವರಿ ದೇವಿಗೆ ಹರಕೆ ಸಲ್ಲಿಸಿದರು.

Leave a Reply

Your email address will not be published. Required fields are marked *

Back To Top