Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಐಪಿಎಲ್-10, ಫೈನಲ್ ಪ್ರವೇಶಿಸಿದ ಪುಣೆ ಸೂಪರ್​ಜೈಂಟ್

Wednesday, 17.05.2017, 12:04 AM       No Comments

ಮುಂಬೈ: ಐಪಿಎಲ್-10ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಆಕರ್ಷಕ ಪ್ರದರ್ಶನ ನೀಡಿದ ಪುಣೆ ಸೂಪರ್​ಜೈಂಟ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್​ಗಳ ಭರ್ಜರಿ ಜಯ ದಾಖಲಿಸಿ ಫೈನಲ್​ಗೆ ಪ್ರವೇಶ ಪಡೆದಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ 2 ವಿಕೆಟ್​ಗಳನ್ನು ಬೇಗ ಪಡೆಯುವ ಮೂಲಕ ಮುಂಬೈ ತಂಡ ಪುಣೆಗೆ ಆರಂಭಿಕ ಆಘಾತ ನೀಡಿತು. ಆದರೆ ಅಜಿಂಕ್ಯ ರಹಾನೆ (56) ಮತ್ತು ಮನೋಜ್ ತಿವಾರಿ (58) ಪುಣೆ ತಂಡಕ್ಕೆ ಆಸರೆಯಾದರು. ಈ ಜೋಡಿ 3ನೇ ವಿಕೆಟ್​ಗೆ 80 ರನ್ ಕಲೆ ಹಾಕಿತು. ರಹಾನೆ ಔಟಾದ ನಂತರ ಕ್ರೀಸ್​ಗಿಳಿದ ಧೋನಿ (40*) ಅಂತಿಮ ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು. ಪುಣೆ ತಂಡ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 162 ರನ್ ಕಲೆ ಹಾಕಿತು.

163 ರನ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡದ ಪರ ಪಾರ್ಥೀವ್ ಪಟೇಲ್ (52) ಅವರನ್ನು ಹೊರತುಪಡಿಸಿ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಸಂಪೂರ್ಣವಾಗಿ ವಿಫಲರಾದರು. ಸೀಮನ್ಸ್, ರಾಯುಡು, ಶರ್ಮಾ ಮತ್ತು ಪೊಲ್ಲಾರ್ಡ್ ಬೇಗನೆ ಔಟಾದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಪಾರ್ಥೀವ್ ಪಟೇಲ್​ಗೆ ಉತ್ತಮ ಸಾಥ್ ನೀಡುವ ಪ್ರಯತ್ನ ನಡೆಸಿದರು. ಆದರೆ ಪಾರ್ಥೀವ್ ಔಟಾದ ನಂತರ ಮುಂಬೈ ಇಂಡಿಯನ್ಸ್ ಹೋರಾಟವೂ ಅಂತ್ಯವಾಯಿತು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿದ ಮುಂಬೈ ತಂಡ 20 ರನ್​ಗಳಿಂದ ಸೋಲನುಭವಿಸಿತು.

ಪುಣೆ ಪರ ಆಕರ್ಷಕ ಬೌಲಿಂಗ್ ನಡೆಸಿದ ಯುವ ಆಟಗಾರ ವಾಷಿಂಗ್ಟನ್ ಸುಂದರ್ 16 ಕ್ಕೆ 3 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ 37 ಕ್ಕೆ 3 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದರು.

ವಾಷಿಂಗ್ಟನ್ ಸುಂದರ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top