Friday, 20th April 2018  

Vijayavani

ಬಿಜೆಪಿ ಅಭ್ಯರ್ಥಿಗಳ 3 ನೇ ಪಟ್ಟಿ ರಿಲೀಸ್​- 59 ಅಭ್ಯರ್ಥಿಗಳ ಹೆಸರು ಪ್ರಕಟ- ವರುಣಾ, ಬಾದಾಮಿ ಇನ್ನೂ ನಿಗೂಢ        ಜೆಡಿಎಸ್​ನಿಂದ ಸೆಕೆಂಡ್​ ಲಿಸ್ಟ್​ ರಿಲೀಸ್​- ಕೈ, ಕಮಲ ರೇಬಲ್​ಗಳಿಗೆ ಮಣೆ- 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ        ಎಚ್​ಡಿಕೆ ಆಸ್ತಿ ವಿವರ ಘೋಷಣೆ- ಕುಮಾರಸ್ವಾಮಿ 12 ಕೋಟಿ ಒಡೆಯ- ಗುತ್ತೇದಾರ್​ಗಿಂತ ಪತ್ನಿ ಶ್ರೀಮಂತೆ        ನಟಿ ಉಮಾಶ್ರೀ ಆಸ್ತಿ ವಿವರ ಘೋಷಣೆ- ಸಾಕವ್ವ 1 ಕೆ.ಜಿ ಚಿನ್ನಾಭರಣದ ಒಡತಿ- ಅವಲಂಬಿತರು ಯಾರು ಇಲ್ಲವೆಂದು ಪ್ರಮಾಣಪತ್ರ        ಚಾಮುಂಡೇಶ್ವರಿಯಲ್ಲಿ ಸಿಎಂ, ವರುಣಾದಲ್ಲಿ ಯತೀಂದ್ರ- ಅಪ್ಪ-ಮಗ ನಾಮಪತ್ರ ಸಲ್ಲಿಕೆ- ಭಾರಿ ಬೆಂಬಲಿಗರ ಜತೆ ತೆರಳಿ ನಾಮಿನೇಷನ್​​​​​​        ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ- ಮನೆಗೆ ಹೋಗಲು ವರುಣನ ಅಡ್ಡಿ- ಸಂಜೆಯ ಮಳೆಗೆ ವಾಹನ ಸವಾರರು ಕಂಗಾಲು       
Breaking News

ಹಿಂದೂ ಸಂಘಟನೆ ನಾಯಕರನ್ನು ಭೇಟಿ ಮಾಡಿದ ತಲೈವಾ

Monday, 19.06.2017, 12:54 PM       No Comments

ಚೆನ್ನೈ: ತಮಿಳು ಚಿತ್ರನಟ ಸೂಪರ್​ಸ್ಟಾರ್​ ರಾಜಕೀಯ ಪ್ರವೇಶ ಕುರಿತು ಭಾರೀ ಸುದ್ದಿ ಹರಡಿರುವ ಬೆನ್ನಲ್ಲೇ ಸೋಮವಾರ ರಜನೀಕಾಂತ್​ ತಮ್ಮ ನಿವಾಸದಲ್ಲಿ ಹಿಂದೂ ಮಕ್ಕಲ್​ ಕಟ್ಚಿ ಸಂಘಟನೆ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಖಟ್ಟರ್​ ಹಿಂದೂ ಸಂಘಟನೆಯಾದ ಹಿಂದೂ ಮಕ್ಕಲ್​ ಕಟ್ಚಿ ಸಂಘಟನೆಯ ನಾಯಕ ಅರ್ಜುನ್​ ಸಂಪತ್​ ಮತ್ತು ಪ್ರಧಾನ ಕಾರ್ಯದರ್ಶಿ ರವಿಕುಮಾರ್​ ಅವರನ್ನು ರಜನಿ ಭೇಟಿಯಾಗಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ರಜನಿಕಾಂತ್​ ತಮಿಳುನಾಡಿಗಾಗಿ ಮತ್ತು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡಲು ಬಯಸಿದ್ದಾರೆ. ಅವರು ರಾಜಕೀಯಕ್ಕೆ ಬರುವ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ರಜನಿಕಾಂತ್​ರನ್ನು ಭೇಟಿ ಮಾಡಿದ ಹಿಂದೂ ಮಕ್ಕಲ್​ ಕಟ್ಚಿ ಸಂಘಟನೆಯ ನಾಯಕರು ತಿಳಿಸಿದ್ದಾರೆ. ಆದರೆ ರಜನಿಕಾಂತ್​ ಇದುವರೆಗೂ ತಮ್ಮ ರಾಜಕೀಯ ಪ್ರವೇಶದ ಕುರಿತು ಸ್ಪಷ್ಟನೆ ನೀಡಿಲ್ಲ.

ನಿನ್ನೆಯಷ್ಟೇ ತಮಿಳುನಾಡು ರೈತರನ್ನು ಭೇಟಿ ಮಾಡಿದ್ದ ರಜನಿಕಾಂತ್​ ಅವರಿಗೆ 1 ಕೋಟಿ ರೂ. ಸಹಾಯಧನ ನೀಡಿದ್ದರು.

Leave a Reply

Your email address will not be published. Required fields are marked *

Back To Top