Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News

ಮೀಸಲು ಬಡ್ತಿಗೆ ಸುಪ್ರೀಂ ಸಮ್ಮತಿ

Wednesday, 06.06.2018, 3:03 AM       No Comments

ನವದೆಹಲಿ: ಸರ್ಕಾರಿ ನೌಕರರ ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಿಬ್ಬಂದಿಗೆ ಮೀಸಲು ನೀಡುವುದಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೆಹಲಿ, ಮಹಾರಾಷ್ಟ್ರ, ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳ ಮೀಸಲು ಬಡ್ತಿ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಕೇಂದ್ರ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಹಾಗೂ ಕೆಲ ರಾಜ್ಯಗಳ ಹೈಕೋರ್ಟ್ ನ್ಯಾಯಪೀಠಗಳು ಮೀಸಲು ಬಡ್ತಿ ನಿಯಮ ರದ್ದುಗೊಳಿಸಿ ಆದೇಶಿಸಿದ್ದವು. ಈ ಸಂಬಂಧದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಿತು. ಸಂವಿಧಾನದ ನಿಯಮಗಳ ಪ್ರಕಾರ ಬಡ್ತಿ ನೀಡಬಹುದಾಗಿದೆ. ಪರಿಶಿಷ್ಟ ವರ್ಗಗಳ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಶಿಷ್ಟ ವರ್ಗಗಳ ಸಿಬ್ಬಂದಿ ಸಂಖ್ಯೆ ಹಾಗೂ ಸಂವಿಧಾನದಲ್ಲಿನ ಅವಕಾಶ ಆಧರಿಸಿ ಮೀಸಲು ನೀಡುವುದರಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ ನಿಯಮ ಉಲ್ಲಂಘಿಸಿ ಮೀಸಲು ನೀಡುವಂತಿಲ್ಲ ಎಂದು ನ್ಯಾಯಪೀಠ ಹೇಳಿದೆ.


ಕರ್ನಾಟಕದಲ್ಲಿ ವ್ಯವಸ್ಥೆ ರಿಪೇರಿ ಕೆಲಸ

ಬೆಂಗಳೂರು: ಬಡ್ತಿ ಮೀಸಲು ವಿಚಾರವಾಗಿ ನಾಲ್ಕು ರಾಜ್ಯಗಳಿಗೆ ಸಂಬಂಧ ಪಟ್ಟಂತೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆ ರಾಜ್ಯದಲ್ಲಿ ಪರಿಣಾಮ ಬೀರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮೀಸಲು ಬಡ್ತಿ ನೀಡಬಹುದೆಂದು ಮಂಗಳವಾರ ಸುಪ್ರೀಂಕೋರ್ಟ್ ನೀಡಿದ ಆದೇಶದ ಬಗ್ಗೆ ಸರ್ಕಾರಿ ನೌಕರರಲ್ಲಿ ಸಾಕಷ್ಟು ಚರ್ಚೆ ನಡೆದಿದ್ದು, ಹೊಸ ಜ್ಯೇಷ್ಠತಾ ಪಟ್ಟಿಯಂತೆ ಹಿಂಬಡ್ತಿ-ಮುಂಬಡ್ತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಬಹುದೆಂದು ಕೆಲವರು ವಾದ ಮಾಡಿದ್ದರು. ಆದರೆ, ಸುಪ್ರೀಂಕೋರ್ಟ್ ಮಂಗಳವಾರ ನೀಡಿರುವ ಸೂಚನೆ ರಾಜ್ಯದಲ್ಲಿ ಪಾಲನೆಯಲ್ಲಿದೆ. ಪರಿಶಿಷ್ಟರಿಗೆ ಕಾನೂನಿನ ಪರಿಧಿಯಲ್ಲಿ ಮೀಸಲು ಬಡ್ತಿ ನೀಡಬಹುದು ಎಂದು ಸುಪ್ರೀಂ ನಾಲ್ಕು ರಾಜ್ಯಗಳಿಗೆ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ಶೇ.18ರಷ್ಟು ಬಡ್ತಿ ಮೀಸಲು ನೀಡಲಾಗಿದೆ. ಈಗ ರಾಜ್ಯದಲ್ಲಿ

ಬಿ.ಕೆ. ಪವಿತ್ರಾ ಪ್ರಕರಣದಲ್ಲಿ ಸುಪ್ರೀಂ ನಿಯಮ ಪಾಲನೆಗೆ ಸೂಚಿಸಿದೆ. ಅದರ ಅನುಷ್ಠಾನವಷ್ಟೆ. ಬಹುತೇಕ ಇಲಾಖೆಗಳಲ್ಲಿ ಶೇ.18ಕ್ಕಿಂತ ಹೆಚ್ಚು ಮೀಸಲು ಬಡ್ತಿ ನೀಡಲಾಗಿದೆ. ಕೆಲವು ಇಲಾಖೆಗಳ ಪ್ರಮುಖ ಹುದ್ದೆಗಳಲ್ಲಿ ಶೇ.100 ಮೀಸಲು ಬಡ್ತಿ ಹೊಂದಿದವರು ಇದ್ದಾರೆ. ಈ ಪರಿಸ್ಥಿತಿ ಸರಿಪಡಿಸುವುದಷ್ಟೆ ಬಿ.ಕೆ.ಪವಿತ್ರ ಪ್ರಕರಣದ ತೀರ್ಪು ಎಂಬುದು ಅಧಿಕಾರಿಗಳ ವಿವರಣೆ.

Leave a Reply

Your email address will not be published. Required fields are marked *

Back To Top