Saturday, 22nd September 2018  

Vijayavani

‘ದಂಗೆ’ ಬಿಸಿ ತಟ್ಟುತ್ತಿದ್ದಂತೆ ದೇವರ ಸ್ತುತಿ - ಶಾರದಂಬೆ ಸನ್ನಿಧಿಯಲ್ಲಿ ಎಚ್​​ಡಿಕೆ - ಸಿಎಂಗೆ ಅಣ್ಣ ರೇವಣ್ಣ ಸಾಥ್​        ರಾಜ್ಯ ರಾಜಕೀಯ ಹಾಸನಕ್ಕೆ ಶಿಫ್ಟ್​ - ಇಂದು ಹಾಸನದಲ್ಲಿ ಜೆಡಿಎಲ್​​ಪಿ ಮೀಟಿಂಗ್​ - ದಳನಾಯಕರಿಂದ ರಣತಂತ್ರದ ಚರ್ಚೆ        ಸಿಎಂ ದಂಗೆ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ - ಇಂದು ಕೂಡ ಹಲವೆಡೆ ಹೋರಾಟ ಸಂಭವ        ಇಂದು ಚಿಕ್ಕಮಗಳೂರಲ್ಲಿ ಸಿಎಂ ಮೀಟಿಂಗ್​ - ಅತಿವೃಷ್ಟಿ, ಅನಾವೃಷ್ಟಿ ಕುರಿತು ಚರ್ಚೆ - ಸಿಎಂಗೆ ವರದಿ ನೀಡಲಿರುವ ಡಿಸಿ        ರಾಫೆಲ್​​ ವಿಮಾನ​​​​ ಖರೀದಿ ಹಗರಣ - ಭಾರತವೇ ಅನಿಲ್​ ಅಂಬಾನಿ ಹೆಸರು ಸೂಚಿಸಿತ್ತು - ವಿವಾದಕ್ಕೆ ತುಪ್ಪ ಸುರಿದ ಹೊಲೆಂಡೆ ಹೇಳಿಕೆ        ಭುಗಿಲೆದ್ದಿರುವ ರಫೇಲ್​​ ಡೀಲ್​ ಹಗರಣ - ಪ್ರಕಟಣೆ ಹೊರಡಿಸಿದ ಫ್ರಾನ್ಸ್​​ ಸರ್ಕಾರ - ಕಂಪನಿಗಳ ಮೇಲೆ ಹಸ್ತಕ್ಷೇಪ ಇಲ್ಲವೆಂದು ಸ್ಪಷ್ಟನೆ       
Breaking News

ಜನರ ಸಮಸ್ಯೆಗೆ ಸ್ಪಂದಿಸಿ

Thursday, 14.06.2018, 5:20 AM       No Comments

ಬಾಗಲಕೋಟೆ: ಗ್ರಾಮೀಣ ಭಾಗದ ಜನರು ನೂರಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಸಮಸ್ಯೆ, ನೋವುಗಳಿಗೆ ಸ್ಪಂದನೆ ಮಾಡಬೇಕಿರುವುದು ನಮ್ಮ ಕರ್ತವ್ಯ. ಅಧಿಕಾರಿಗಳು ಗ್ರಾಮೀಣ ಜನರ ಸಂಪರ್ಕದಲ್ಲಿದ್ದು, ಸಮಸ್ಯೆ ಬಗೆ ಹರಿಸಬೇಕು ಎಂದು ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ ಹೇಳಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಸಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮತನಾಡಿದರು.

ಅಧಿಕಾರಿಗಳು ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಎನ್ನುವ ದೂರುಗಳು ಬಂದಿವೆ. ಎಲ್ಲ ಇಲಾಖೆ ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗಾಗಿ ಉತ್ತಮ ಸೇವೆ ಮಾಡಬೇಕು. ಕಚೇರಿಗಳಲ್ಲಿ ಕುಳಿತರೆ ಸಮಸ್ಯೆಗಳು ಪರಿಹಾರವಾಗಲ್ಲ. ಖುದ್ದು ಗ್ರಾಮಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಜನ ಸಂಪರ್ಕ ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನೇಕ ಸರ್ಕಾರಿ ಕಟ್ಟಡಗಳು ಸುಸ್ಥಿತಿಯಲ್ಲಿ ಇಲ್ಲ. ಸರ್ಕಾರಿ ಶಾಲೆಗಳು, ಅಂಗನವಾಡಿ ಕಟ್ಟಡಗಳು ಅಪಾಯದ ಗಂಟೆ ಭಾರಿಸುತ್ತಿವೆ. ತಕ್ಷಣಕ್ಕೆ ಅಧಿಕಾರಿಗಳು ಗಮನ ಹರಿಸಬೇಕು. ದುರಸ್ತಿ ಕಾರ್ಯ ಮಾಡಬೇಕು. ಗುಣಮಟ್ಟ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಎಷ್ಟೇ ಜನ ವಿದ್ಯಾರ್ಥಿಗಳು ಬಂದರೂ ಪ್ರವೇಶ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ, ವಸತಿ ನಿಲಯಗಳಲ್ಲಿನ ಶೌಚಗೃಹಗಳು ಸರಿಯಾಗಿಲ್ಲ. ಗುತ್ತಿಗೆ ನೀಡಿದ್ದರೂ ಲ್ಯಾಂಡ್ ಆರ್ವಿುಯವರು ಶೌಚಗೃಹ ಕಾಮಗಾರಿ ಬೇಗನೆ ಮಾಡುತ್ತಿಲ್ಲ. ಲ್ಯಾಂಡ್ ಆರ್ವಿು ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣ ಗೊಳಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಶು ವೈದ್ಯರು ಬರಲ್ರೀ: ಪಶು ಸಂಗೋಪನೆ ಇಲಾಖೆ ವೈದ್ಯರು ಸರಿಯಾಗಿ ಕೆಲಸ ಮಾಡಲ್ಲ, ಇಷ್ಟು ದಿನಾ ಆಯಿತು ನಾವು ಅವರನ್ನ ನೋಡಿಲ್ರೀ..ಹೀಗೆ ತಾಪಂ ಸದಸ್ಯರು ಸಭೆಯಲ್ಲಿ ಪಶು ವೈದ್ಯರ ಬಗ್ಗೆ ಅಸಮಾಧಾನ ಹೊರಹಾಕಿದರು. ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಒಂದಿನವು ನಮ್ಮ ದನ-ಕರುಗಳಿಗೆ ಚಿಕಿತ್ಸೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಾಪಂ ಅಧ್ಯಕ್ಷ ಪರನಗೌಡರ ಪ್ರತಿಕ್ರಿಯೆ ನೀಡಿ, ವೈದ್ಯರು ಈ ರೀತಿ ಮಾಡುವುದು ಸರಿಯಲ್ಲ. ದನ-ಕರುಗಳು ಅನಾರೋಗ್ಯದಿಂದ ಬಳಲಿದರೆ ತಕ್ಷಣಕ್ಕೆ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

35 ಲಕ್ಷ ರೂ.ಅನುದಾನ ಲ್ಯಾಪ್ಸ್: ಕಳೆದ 2016-17 ಸಾಲಿನಲ್ಲಿ ತಾಲೂಕು ಪಂಚಾಯಿತಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಬಂದಿತ್ತು. ಅನುದಾನ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿ ಕ್ರಿಯಾಯೋಜನೆ ರೂಪಿಸಲಾಗಿತ್ತು. ಆದರೆ, ನಿಗದಿತ ಸಮಯಕ್ಕೆ ಅನುದಾನ ಬಳಕೆಯಾಗದ ಕಾರಣ 35 ಲಕ್ಷ ರೂ. ಲ್ಯಾಪ್ಸ್ ಆಗಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ. ಪ್ರಸಕ್ತ ವರ್ಷ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ, ರೇಷ್ಮೆ, ತೋಟಗಾರಿಕೆ ಸೇರಿದಂತೆ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ತಾಪಂ ಉಪಾಧ್ಯಕ್ಷ ಸಲೀಂ ಶೇಖ್, ತಾಪಂ ಇಒ ಆರ್.ಎನ್.ಬಂಗಾರಪ್ಪನವರ, ತಾಪಂ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

Back To Top