Friday, 25th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಸೆಲ್ಫಿ ಕೇಳಿದ್ದಕ್ಕೆ ಬಾಲಕನ ಮೊಬೈಲ್​ ಒಡೆದ ತೆಲುಗು ನಟಿ ಅನಸೂಯ ವಿರುದ್ಧ ದೂರು

Thursday, 08.02.2018, 11:36 AM       No Comments

ಹೈದರಾಬಾದ್‌‌: ತೆಲುಗಿನ ಖ್ಯಾತ ಆ್ಯಂಕರ್‌ ಹಾಗೂ ನಟಿ ಅನಸೂಯ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಅಭಿಮಾನಿ ಬಾಲಕನ ಮೊಬೈಲ್​ ಒಡೆದು ಹಾಕಿದ್ದಾರೆಂದು ನಟಿಯ ವಿರುದ್ಧ ದೂರು ದಾಖಲಾಗಿದೆ.

ಮೂಲಗಳ ಪ್ರಕಾರ ಸೋಮವಾರ ಮಹಿಳೆಯೊಬ್ಬರು ತಮ್ಮ ಮಗನೊಂದಿಗೆ ಹೈದರಾಬಾದಿನ ತರ್ನಾಕ್​ ಪೊಲೀಸ್​ ಠಾಣೆಗೆ ತೆರಳಿ ಅನಸೂಯ ಅವರು ಮಗನ ಮೊಬೈಲ್​ ಒಡೆದು ಹಾಕಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

ನಗರದ ತರ್ನಾಕ್‌ನಲ್ಲಿರುವ ತಮ್ಮ ತಾಯಿ ಮನೆಗೆ ಅನಸೂಯ ತೆರಳಿದಾಗ. ಅಭಿಮಾನಿ ಬಾಲಕನೊಬ್ಬ ಅನಸೂಯ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಕೇಳಿದ್ದಾನೆ. ಈ ವೇಳೆ ಕೋಪಗೊಂಡ ನಟಿ ಆ ಬಾಲಕನ ಫೋನ್‌ ಕಸಿದು ಒಡೆದು ಹಾಕಿದ್ದಾರೆ ಎನ್ನಲಾಗಿದೆ.

ಅನಸೂಯ ವರ್ತನೆಗೆ ಬಾಲಕನ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದು, ಉಸ್ಮಾನಿಯಾ ವಿಶ್ವವಿದ್ಯಾಲಯದ ಪೊಲೀಸ್‌ ಠಾಣೆಯಲ್ಲಿ ನಟಿ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಖಚಿತ ಪಡಿಸಿದ್ದು, ಪ್ರಕರಣದ ಸಾಕ್ಷಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಷಯ ಎಲ್ಲೆಡೆ ಹರಡುತ್ತಿದ್ದಂತೆ ಎಚ್ಚೆತ್ತ ನಟಿ ಅನಸೂಯ, ನಮ್ಮ ದೇಶಕ್ಕೆ ಇಂತಹ ಸುದ್ದಿಗಳ ಅವಶ್ಯಕತೆ ಇಲ್ಲ. ಒಂದು ವೇಳೆ ಮೊಬೈಲ್​ ಒಡೆದಿದ್ದರೆ ಕ್ಷಮೆ ಇರಲಿ. ಇಂತಹ ವಿಚಾರದಲ್ಲಿ ನನ್ನನ್ನು ದೂರುವುದು ಸರಿಯಲ್ಲ ಎಂದಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top