Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಏರ್​ ಇಂಡಿಯಾ ಕೊಳ್ಳುವವರೇ ಇಲ್ಲ!

Wednesday, 30.05.2018, 6:35 PM       No Comments

ನವದೆಹಲಿ: ಭಾರಿ ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಕಂಪನಿಯ ಷೇರುಗಳನ್ನು ಖರೀದಿಸಲು ಇದುವರೆಗೂ ಯಾವುದೇ ಬಿಡ್​ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಕಾರ್ಯದರ್ಶಿ ಆರ್​. ಎನ್​. ಚೌಬೆ ತಿಳಿಸಿದ್ದಾರೆ.

ಏರ್​ ಇಂಡಿಯಾ ಷೇರುಗಳ ಖರೀದಿಗೆ ಬಿಡ್​ ಸಲ್ಲಿಸಲು ಗುರುವಾರ (ಮೇ 31) ಕೊನೆಯ ದಿನವಾಗಿದೆ. ಈಗಾಗಲೇ ಬಿಡ್​ ಸಲ್ಲಿಕೆ ಅವಧಿಯನ್ನು ಮೇ 14 ರಿಂದ ಮೇ 31ರ ವರೆಗೆ ವಿಸ್ತರಿಸಲಾಗಿದೆ. ಬಿಡ್​ ಸಲ್ಲಿಕೆ ಅವಧಿಯನ್ನು ಮತ್ತಷ್ಟು ವಿಸ್ತರಿಸಲು ಸಾಧ್ಯವಿಲ್ಲ ಎಂದು ಚೌಬೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಏರ್​ ಇಂಡಿಯಾ ಕಂಪನಿಯ ಶೇ.76 ರಷ್ಟು ಶೇರುಗಳನ್ನು ಮಾರಾಟ ಮಾಡುವ ಮೂಲಕ ಬಂಡವಾಳ ಹಿಂಪಡೆಯಲು ಮುಂದಾಗಿದೆ. ಆದರೆ, ಷೇರು ಖರೀದಿಯ ನಿಯಮಾವಳಿಗಳನ್ನು ಬಿಡುಗಡೆ ಮಾಡಿದ ನಂತರ ಯಾವುದೇ ಕಂಪನಿ ಷೇರು ಖರೀದಿಗೆ ಆಸಕ್ತಿ ತೋರುತ್ತಿಲ್ಲ. ಕೆಲವು ಕಂಪನಿಗಳು ತಾವು ಷೇರು ಖರೀದಿಗೆ ಮುಂದಾಗುವುದಿಲ್ಲ ಎಂದು ಸಾರ್ವಜನಿಕವಾಗಿಯೇ ಘೋಷಣೆ ಮಾಡಿವೆ.

ಇದಕ್ಕೂ ಮೊದಲು ಟಾಟಾ ಗ್ರೂಪ್​ ಏರ್​ ಇಂಡಿಯಾದಲ್ಲಿ ಹೂಡಿಕೆ ಮಾಡಲು ಆಸಕ್ತ ತೋರುತ್ತಿದೆ ಎಂದು ಸುದ್ದಿಯಾಗಿತ್ತು. ಆದರೆ, ಟಾಟಾ ಗ್ರೂಪ್​ ಇದುವರೆಗೆ ಷೇರು ಖರೀದಿ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

Leave a Reply

Your email address will not be published. Required fields are marked *

Back To Top