Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

Monday, 09.04.2018, 8:26 PM       No Comments

ಬೆಳಗಾವಿ: ಖಾನಾಪುರ ತಾಲೂಕಿನ ದೇಗುಲಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿವೇಗದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಂಡ್ಯ, ಮೈಸೂರು, ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಭದ್ರಾವತಿ ಮೂಲದ ಅಮಿತ್, ಚಾಲಕ ಮಹಮದ್​ಗೆ ಗಾಯವಾಗಿದೆ.

ಮೈಸೂರಿನ ಬಿಳಿಕೆರೆ ಗ್ರಾಮದ ಸುಧೀಂದ್ರಗೌಡ(25), ಬೆಂಗಳೂರು ಮೂಲದ ರಘುನಾಥ್(25), ಮಂಡ್ಯ ಮೂಲದ ಮಲ್ಲಿಕಾರ್ಜುನ(25) ಮೃತರು.

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top