Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ಭಾರಿ ಮಳೆಗೆ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರ ಸಾವು

Monday, 16.10.2017, 7:06 AM       No Comments

ಬೀದರ್‌: ಸತತ ಸುರಿಯುತ್ತಿರುವ ಭಾರಿ ಮಳೆಗೆ ದಿನ ನಿತ್ಯ ಒಬ್ಬರಲ್ಲ ಒಬ್ಬರು ಸಾವಿಗೀಡಾಗುತ್ತಿದ್ದಾರೆ. ನಿನ್ನೆ ಸುರಿದ ಬೀದರ್​ ಜಿಲ್ಲೆಯಾದ್ಯಾಂತ ಸುರಿದ ಮಳೆಯ ಆರ್ಭಟಕ್ಕೆ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಲಾಡವಂತಿ ಗ್ರಾಮದ ನಿವಾಸಿಗಳಾದ ರೈತ ಕೇಶವ ಬಾಬುರಾವ, ಪತ್ನಿ ಸತ್ಯವತಿ ಕೇಶವ ಹಾಗೂ ಕೇಶವ ಅಕ್ಕ ಲಕ್ಷ್ಮಿ ಇಂದ್ರಜೀತ ವಾಡೇಕರ್ ಎಂಬುವವರು ಮೃತಪಟ್ಟಿದ್ದಾರೆ.

ಹೊಲದಲ್ಲಿ ಬೆಳೆ ತೆಗೆದು ವಾಪಸ್ ಮನೆಗೆ ಬರುವಾಗ ಈ ಘಟನೆ ಸಂಭವಿಸಿದ್ದು, ಹೊಂಡ ಇರುವುದನ್ನು ತಿಳಿಯದೆ ಬಿದ್ದು ಈ ದುರ್ಘಟನೆ ನಡೆದು ಹೋಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top