Tuesday, 25th September 2018  

Vijayavani

ಬಗರ್​ಹುಕುಂ ಭೂಮಿ ಪರಭಾರೆ ಆರೋಪ- ಮಾಜಿ ಡಿಸಿಎಂ ಆರ್. ಅಶೋಕ್​​ ಅರ್ಜಿ ವಜಾ, ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು        ಪುಟ್ಟರಂಗ ಶೆಟ್ಟಿ ನನ್ನನ್ನು ಮಂತ್ರಿ ಮಾಡಿಲ್ಲ- ಕಾಂಗ್ರೆಸ್ ಗುರಿಯಾಗಿಸಿ ನಾನು ಹೇಳಿಲ್ಲ- ಎನ್​​.ಮಹೇಶ್ ತಿರುಗೇಟು        ಶಸ್ತ್ರಚಿಕಿತ್ಸೆ ಬಳಿಕ ದರ್ಶನ್ ಮೊದಲ ದರ್ಶನ- ಆಕ್ಸಿಡೆಂಟ್​ ಕೇಸಲ್ಲಿ ಬಲಿಪಶುವಾದ್ರಾ ಆಂಥೋಣಿ..?- ಅಪಘಾತಕ್ಕೂ ಮುನ್ನ ಪಾರ್ಟಿ        ಹಾಸನದಲ್ಲಿ ಮುಸ್ಲಿಂ ಯುವತಿ ಪ್ರೇಮ - ನಿನಗಿಷ್ಟ ಬಂದವರ ಕಡೆ ಹೋಗುವಂತೆ ಕೋರ್ಟ್​ ತೀರ್ಪು- ಹುಡುಗನ ಬಳಿ ಕಳಿಸದೆ ಹೈಡ್ರಾಮಾ        ನವೆಂಬರ್​​ನಲ್ಲಿ ಮತ್ತೆ ಸನ್ನಿ ಶೋಗೆ ಸಿದ್ಧತೆ- ಕನ್ನಡಪರ ಸಂಘಟನೆಗಳಿಂದ ವಿರೋಧ- ಬೆಂಗಳೂರಿಗೆ ಬರದಂತೆ ಪ್ರತಿಭಟನೆಗೆ ನಿರ್ಧಾರ        ಹ್ಯಾರೀಸ್ ಪುತ್ರ ನಲಪಾಡ್ ಈಗ ಬಾಸ್- ಎರಡು ಮುಕ್ಕಾಲು ಲಕ್ಷ ಕೊಟ್ಟು 8055 ನಂಬರ್ ಖರೀದಿ-  ದಿಗ್ವಿಜಯ ನ್ಯೂಸ್ ಎಕ್ಸ್​ಕ್ಲೂಸಿವ್       
Breaking News

ಹುಲಿ ಸಫಾರಿ ಪ್ರೀಯರಿಗೊಂದು ಕಹಿ ಸುದ್ದಿ

Thursday, 04.01.2018, 11:26 AM       No Comments

ಬೆಂಗಳೂರು: ನೀವೂ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಬೇಕು ಅಂತಾ ಪ್ಲ್ಯಾನ್​ ಏನಾದರೂ ಮಾಡಿಕೊಂಡಿದ್ದೀರಾ? ಹಾಗಿದ್ದರೆ ಆ ಪ್ಲ್ಯಾನ್​ನ್ನು ಒಂದು ವಾರಗಳ ಕಾಲ ಮುಂದೂಡುವುದು ಒಳ್ಳೆಯದು.

ಯಾಕೆಂದರೆ ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಹಾಗೂ ವನ್ಯ ಜೀವಿ ಧಾಮಗಳಲ್ಲಿ ಒಮ್ಮೆಲೆ ಹುಲಿ ಗಣತಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಎಲ್ಲಾ ಸಫಾರಿಗಳನ್ನು ಒಂದು ವಾರಗಳ ಕಾಲ ನಿರ್ಬಂಧಿಸಲಾಗಿದೆ.

ಇದೇ ತಿಂಗಳ 07 ರಿಂದ 13ರ ವರೆಗೆ ಹುಲಿ ಗಣತಿ ನಡೆಯಲಿದ್ದು, ಈ ಗಣತಿಗೆ ಯಾವುದೇ ಅಡಚಣೆ ಆಗಬಾರದೆಂದು ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಸಫಾರಿಯನ್ನು ಬಂದ್ ಮಾಡಲಾಗಿದೆ.

ರಾಜ್ಯದಲ್ಲಿ ಒಟ್ಟು 5 ಹುಲಿ ಸಂರಕ್ಷಿತ ಪ್ರದೇಶಗಳಿವೆ. ಇವುಗಳಲ್ಲಿ ಚಾಮರಾಜನಗರ ಜಿಲ್ಲೆಯ ಬಂಡೀಪುರ, ಬಿ.ಆರ್.ಟಿ, ಮೈಸೂರು ಜಿಲ್ಲೆಯ ನಾಗರಹೊಳೆ, ಚಿಕ್ಕಮಗಳೂರು ಜಿಲ್ಲೆಯ ಭದ್ರಾ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಸಫಾರಿಯನ್ನು ಬಂದ್ ಮಾಡಲಾಗುತ್ತಿದೆ.(ದಿಗ್ವಿಜಯ ನ್ಯೂಸ್) 

Leave a Reply

Your email address will not be published. Required fields are marked *

Back To Top