Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ಆಗಸ್ಟ್​ನಲ್ಲಿ 5 ದಿನ ತಿರುಪತಿ ತಿಮ್ಮಪ್ಪನ ದರ್ಶನ ಬಂದ್​.. ಯಾಕೆ ಗೊತ್ತಾ?

Friday, 06.07.2018, 4:36 PM       No Comments

ಬೆಂಗಳೂರು: ಆಗಸ್ಟ್​ನಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಚಿಂತಿಸುತ್ತಿದ್ದೀರಾ? ಹಾಗಾದರೆ ಈ ಸುದ್ದಿಯನ್ನು ಒಮ್ಮೆ ಓದಿ. ಯಾಕೆಂದರೆ ಆಗಸ್ಟ್​ನಲ್ಲಿ 5 ದಿನಗಳ ಕಾಲ ಭಕ್ತಾದಿಗಳಿಗೆ ದೇಗುಲದ ಪ್ರವೇಶವನ್ನು ಟಿಟಿಡಿ ನಿರ್ಬಂಧಿಸುವ ಸಾಧ್ಯತೆ ಇದೆ.

ಹೌದು, ಆಗಸ್ಟ್​ನಲ್ಲಿ ತಿರುಪತಿಯಲ್ಲಿ ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣಂ ಪೂಜೆ ಹಮ್ಮಿಕೊಳ್ಳಲಾಗಿದೆ. 12 ವರ್ಷಗಳಿಗೆ ಒಮ್ಮೆ ಈ ಪೂಜೆಯನ್ನು ಮಾಡಲಾಗುತ್ತಿದೆ. ಪೂಜೆಯ ಸಂದರ್ಭದಲ್ಲಿ ದರ್ಶನದ ಅವಧಿ ಕಡಿಮೆ ಇರುತ್ತದೆ. ಹಾಗಾಗಿ ಪ್ರತಿ ದಿನ ಕೇವಲ 30 ರಿಂದ 35 ಸಾವಿರ ಭಕ್ತಾದಿಗಳಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್​ 13 ರಿಂದ 16ರ ವರೆಗೆ ಭಕ್ತಾದಿಗಳಿಗೆ ದೇವರ ದರ್ಶನವನ್ನು ನಿರ್ಬಂಧಿಸುವ ಸಾಧ್ಯತೆ ಇದೆ.

ಜತೆಗೆ ಆಗಸ್ಟ್​ 12 ರಿಂದ 16 ರ ವರೆಗೆ ಅರ್ಜಿತ ಸೇವೆಯನ್ನು ಸಹ ರದ್ದುಗೊಳಿಸಲಾಗಿದೆ. ಹಾಗಾಗಿ ಭಕ್ತಾದಿಗಳು ತಿರುಪತಿಗೆ ಬರುವ ಪ್ಲ್ಯಾನ್​ನಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಟಿಟಿಡಿ ಮನವಿ ಮಾಡಿಕೊಂಡಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top