Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಬಾರಾಮುಲ್ಲಾದಲ್ಲಿ ಇಬ್ಬರು ಹಿಜ್ಬುಲ್​ ಉಗ್ರರ ಹತ್ಯೆ

Wednesday, 21.06.2017, 11:50 AM       No Comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪುರೆ ಪಟ್ಟಣದ ಬಳಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಹಿಜ್ಬುಲ್​ ಉಗ್ರರು ಮೃತಪಟ್ಟಿದ್ದಾರೆ.

ಮೃತಪಟ್ಟಿರುವ ಉಗ್ರರನ್ನು ಇಂಡರ್​ಗಾಮ್​ ಪಟ್ಟಾನ್​ ಗ್ರಾಮದ ಬಸಿತ್​ ಅಹಮದ್​ ಮಿರ್​ ಮತ್ತು ಬಾರ್ತ್ ಸೋಪುರೆಯ ಗುಲ್ಜಾರ್​ ಅಹಮದ್​ ಎಂದು ಗುರುತಿಸಲಾಗಿದೆ.

ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಮಂಗಳವಾರ ರಾತ್ರಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಬುಧವಾರ ಬೆಳಗ್ಗೆ ಶೋಧಕಾರ್ಯ ನಡೆಸುತ್ತಿದ್ದ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪ್ರತಿದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಮೃತಪಟ್ಟ ಉಗ್ರರಿಂದ 2 ಎಕೆ ರೈಫಲ್​, 5 ಎಕೆ ಮ್ಯಾಗಜೀನ್​, 124 ಎಕೆ ಗುಂಡುಗಳು, ಗ್ರನೇಡ್​ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

– ಏಜೆನ್ಸೀಸ್​

Leave a Reply

Your email address will not be published. Required fields are marked *

Back To Top