Wednesday, 18th October 2017  

Vijayavani

1. ರಾತ್ರಿ ಹಾಕಿದ ಟಾರು ಬೆಳಗ್ಗೆ ಕಿತ್ತುಬಂತು- ಸರ್ಕಾರದಿಂದ ಕಾಟಾಚಾರದ ಗುಂಡಿ ಮುಚ್ಚೋಕಾರ್ಯ- ಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ 2. ಬರಿಗೈಯಲ್ಲಿ ಕಾರ್ಮಿಕನಿಂದ ಮಾನ್​ಹೋಲ್​ ಸ್ವಚ್ಛತೆ- ಸುರಕ್ಷಾ ಸಾಧನ ನೀಡಿದ ಮಹಾನಗರ ಪಾಲಿಕೆ- ಮಂಗಳೂರಿನಲ್ಲಿ ಅಮಾನವೀಯ ಘಟನೆ 3. ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನಕ್ಕೆ ಆಕ್ಷೇಪ- ವರ್ತಕರೊಂದಿಗೆ ಪರಿಸರ ಪ್ರೇಮಿಗಳ ವಾಗ್ವಾದ- ಮೈಸೂರಿನಲ್ಲಿ ಪಟಾಕಿ ಜಟಾಪಟಿ 4. ಅನೈತಿಕ ಸಂಬಂಧ ತಿಳಿದು ಗಂಡ ಬಿಟ್ಟ- ಪ್ರಿಯಕರನಿಗಾಗಿ ಮಗಳಿಗೆ ಕೊಟ್ಲು ಕಾಟ- ಗಂಗಾವತಿಯ ಹಿರೇಜಂತಕಲ್​ನಲ್ಲಿ ಕ್ರೂರಿ ತಾಯಿ 5. ನೋಟ್​ಬ್ಯಾನ್​ ವಿಚಾರದಲ್ಲಿ ಕಮಲ್​ ಉಲ್ಟಾ- ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚನೆ- ಇದು ಕಮಲ್​ ಹೊಸ ರಾಜಕೀಯ ಆಟ
Breaking News :

ಉಗ್ರರ ಗುಂಡಿನ ದಾಳಿಗೆ ಇಬ್ಬರು ಯೋಧರು ಹುತಾತ್ಮ

Sunday, 13.08.2017, 8:27 AM       No Comments

ಶ್ರೀನಗರ: ಭಾರತೀಯ ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ನಡೆದಿದೆ. ಉಗ್ರರ ಗುಂಡಿನ ದಾಳಿಗೆ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಶೋಪಿಯಾನ ಜಿಲ್ಲೆಯ ಅವನೀರ್​ ಎಂಬ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಯನ್ನಧಾರಿಸಿ ನಿನ್ನೆ ಶನಿವಾರ ಕಾರ್ಯಾಚರಣೆಗೆ ಇಳಿದಿದೆ. ಈ ವೇಳೆ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿರುವಾಗಲೇ ಏಕಾಏಕಿ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಅವರನ್ನು 92 ಬೇಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಪದೇ ಪದೇ ಭಾರತದ ಒಳನುಸುಳಲು ಪ್ರಯತ್ನಿಸುತ್ತಿರುವ ಉಗ್ರರು ಮುಂಬರುವ ಸ್ವಾತಂತ್ರ್ಯೋತ್ಸವದ ಸಂಭ್ರಮದ ಶಾಂತಿಗೆ ಭಂಗ ತರಲು ಯತ್ನಿಸಿತ್ತಿದ್ದಾರೆ​ ಎನ್ನಲಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top