Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

3 ಜಿಲ್ಲೆ ಬಿಟ್ಟರೆ ಉಳಿದವರಿಗೆ ಕನ್ನಡ ಮಾತನಾಡಲು ಯೋಗ್ಯತೆ ಇಲ್ಲ: ಅನಂತಕುಮಾರ ಹೆಗಡೆ

Saturday, 17.02.2018, 4:14 PM       No Comments

ಪುತ್ತೂರು: ಭಾಷಾ ಶುದ್ಧತೆ ಇಲ್ಲದವರಿಗೆ ಕನ್ನಡ ಮಾತನಾಡಲು ಯೋಗ್ಯತೆ ಇಲ್ಲ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪುತ್ತೂರು ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಕನ್ನಡ ಭಾಷಾ ಶುದ್ಧತೆ ಇಲ್ಲ. ಈ ಕಾರಣಕ್ಕಾಗಿ ಅವರಿಗೆ ಕನ್ನಡ ಮಾತನಾಡಲು ಯೋಗ್ಯತೆಯೂ ಇಲ್ಲ. ಇನ್ನು ಬೆಂಗಳೂರಿಗರ ಪರಿಸ್ಥಿತಿ ಹೇಳ ತೀರದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬೇಸಿಕ್ ಸ್ಕಿಲ್ ಇಲ್ಲ.

ಕೇಂದ್ರ ಸರ್ಕಾರವು ಸ್ಕಿಲ್‌ ಗ್ಯಾಪ್ ಅನಾಲಿಸಿಸ್ ನಡೆಸಲು ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದರೂ, ಈ ಸರ್ಕಾರ ಸುಮ್ಮನಿದೆ. ಬೇಸಿಕ್ ಸ್ಕಿಲ್ ಇಲ್ಲದವರು ಸ್ಕಿಲ್ ಗ್ಯಾಪ್ ಅನಾಲಿಸಿಸ್ ನಡೆಸುವುದಾದರೂ ಏನು ಎಂದು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *

Back To Top