Saturday, 26th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಜನಸೇವೆಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿ, ಪ್ರಧಾನಿ ಮೋದಿ

Friday, 21.04.2017, 2:03 PM       No Comments

ನವದೆಹಲಿ: ಜನರ ಸೇವೆಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿ, ಸ್ವಯಂ ಪ್ರಚಾರಕ್ಕಾಗಿ ಬಳಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ. ವೀಕ್ಷಿಸಿ ದಿಗ್ವಿಜಯ ನ್ಯೂಸ್ LIVE

ಪೋಲಿಯೋ ಲಸಿಕೆ ಹಾಕುವ ದಿನಾಂಕದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ಮಾಡಿದರೆ ಅದು ಅತ್ಯತ್ತಮ ಕೆಲಸ. ಅದರ ಬದಲು ಪೋಲಿಯೋ ಲಸಿಕೆ ಹಾಕುವ ಫೋಟೋ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದರೆ ಅದರಿಂದ ಏನೂ ಉಪಯೋಗವಿಲ್ಲ. ಸಾಮಾಜಿಕ ಜಾಲತಾಣಗಳನ್ನು ಜನರ ಸೇವೆಗಾಗಿ ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಕುರಿತು ಅಧಿಕಾರಿಗಳ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದು ಮೋದಿ 11ನೇ ನಾಗರಿಕ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ತಿಳಿಸಿದರು.

ರಾಷ್ಟ್ರ ಹಿತಕ್ಕಾಗಿ ದುಡಿಯಲು ನಾನು ಸದಾ ಸಿದ್ಧ, ಇದಕ್ಕೆ ಅಗತ್ಯವಿರುವ ರಾಜಕೀಯ ಇಚ್ಛಾಶಕ್ತಿ ನನ್ನಲ್ಲಿದೆ. ಅಧಿಕಾರಿಗಳು ರಾಜಕೀಯ ಇಚ್ಛಾಶಕ್ತಿಯನ್ನು ಜನರ ಬಳಿ ತಲುಪಿಸುವ ಕೆಲಸ ಮಾಡಬೇಕು. ಯಾವುದೇ ಒಂದು ಕೆಲಸ ಸುಸೂತ್ರವಾಗಿ ನಡೆಯಬೇಕೆಂದರೆ ರಾಜಕೀಯ ಇಚ್ಛಾಶಕ್ತಿ, ಅಧಿಕಾರಿಗಳ ಕರ್ತೃ್ವ ಮತ್ತು ನಾಗರಿಕರ ಸಹಭಾಗಿತ್ವದ ಅಗತ್ಯವಿದೆ. ಈ ಮೂರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸವಾಗಬೇಕಿದೆ ಎಂದು ಮೋದಿ ತಿಳಿಸಿದರು.

– ಪಿಟಿಐ/ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top