Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಪ್ರತ್ಯೇಕ ರಾಜ್ಯ ಬೇಕೆಂದಿದ್ದ ಶ್ರೀರಾಮುಲುಗೆ ಎಚ್ಡಿಕೆ ಹೇಳಿದ್ದೇನು?

Thursday, 12.07.2018, 7:25 PM       No Comments

ವಿಧಾನಸಭೆ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿಸಬೇಕೆಂಬ ಬಿಜೆಪಿ ಶಾಸಕ ಶ್ರೀರಾಮುಲು ಅವರ ಹೇಳಿಕೆಗೆ ಸದನದಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ “ರಾಜ್ಯವನ್ನು ಪ್ರತ್ಯೇಕಿಸುವುದು ನಮ್ಮ ಸರ್ಕಾರದ ಗುರಿಯಲ್ಲ. ಬದಲಿಗೆ, ಸಮಗ್ರ ಕರ್ನಾಟಕದ ಅಭಿವೃದ್ಧಿ ನಮ್ಮ ಗುರಿ,” ಎಂದು ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಬಜೆಟ್​ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಶಾಸಕ ಶ್ರೀರಾಮುಲು ಅವರು ಉತ್ತರ ಕರ್ನಾಟಕಕ್ಕೆ ಈ ಬಜೆಟ್​ನಲ್ಲಿ ಆಗಿರುವ ಅನ್ಯಾಯದಿಂದ ಬೇಸತ್ತು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿಕೆ ನೀಡಿದ್ದರು.

ಇಂದು ಬಜೆಟ್​ ಮೇಲಿನ ಭಾಷಣದಲ್ಲಿ ಶ್ರೀರಾಮುಲು ಅವರ ಹೇಳಿಕೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಪ್ರತ್ಯೇಕ ರಾಜ್ಯದ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಅನ್ಯಾಯವಾಗಿದೆ ಎಂಬುದು ಸರಿಯಲ್ಲ

ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಆಗದೇ ಇರಲು ಹಲವು ಕಾರಣಗಳಿವೆ. ಆದರೆ, ಅದಕ್ಕೆ ನನ್ನನ್ನು ಹೊಣೆಗಾರನನ್ನಾಗಿಸಲಾಗುತ್ತಿದೆ. ಅದಕ್ಕೆ ನಾನು ಕಾರಣನೇ? ಹೈದರಾಬಾದ್​ ಕರ್ನಾಟಕದಲ್ಲಿ ಕಾರ್ಖಾನೆಗಳನ್ನು ತೆರೆಯಲು ಹೂಡಿಕೆದಾರರು ಉತ್ಸುಕರಾಗಿದ್ದಾರೆ. ಅಲ್ಲದೆ, ಪ್ರತ್ಯೇಕ ಅನುದಾನವನ್ನೂ ಈ ಸರ್ಕಾರ ನೀಡುತ್ತಿದೆ. ಇನ್ನು ಕೃಷಿ ಸಾಲಮನ್ನಾದಲ್ಲಿ ಬೆಳಗಾವಿ ಮತ್ತು ಕಲಬುರಗಿ ಭಾಗಕ್ಕೆ ಹೆಚ್ಚಿನ ಲಾಭವಾಗಿದೆ. ಇಷ್ಟಾಗಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬುದು ಸರಿಯಲ್ಲ. ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಚರ್ಚೆಗೆ ಸಿದ್ಧ ಎಂದೂ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಶ್ರೀರಾಮುಲು ಇಲ್ಲಿಯೇ ಇರಬೇಕು

ಪ್ರತ್ಯೇಕ ರಾಜ್ಯದ ಕುರಿತ ಶ್ರೀರಾಮುಲು ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಮಾತನಾಡುವ ವೇಳೆ ಸ್ವಾರಸ್ಯಕರ ಪ್ರಸಂಗವೊಂದು ನಡೆಯಿತು. ಸಿಎಂ ಮಾತನಾಡುವಾಗ ಮಧ್ಯಪ್ರವೇಶ ಮಾಡಿದ ಸ್ಪೀಕರ್​ ರಮೇಶ್​ಕುಮಾರ್​ ಅವರು, “ಹಿಂದೆ ಹೈದರಾಬಾದ್​ ಕರ್ನಾಟಕದ ಬಳ್ಳಾರಿ ಜಿಲ್ಲೆ ಮದ್ರಾಸ್​ ಪ್ರಾಂತ್ಯಕ್ಕೆ ಸೇರಿತ್ತು. ಆ ಕಾರಣಕ್ಕೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ,” ಎಂದು ಹೇಳಿದರು. ಆಗ ಮತ್ತೆ ಮಾತು ಮುಂದುವರಿಸಿದ ಮುಖ್ಯಮಂತ್ರಿ, “ಹಾಗಿದ್ದರೆ ಅವರನ್ನು(ಶ್ರೀರಾಮುಲು) ಮದ್ರಾಸ್​ ಪ್ರಾಂತ್ಯಕ್ಕೆ ಕಳಿಸೋಣವೇ?” ಎಂದರು. ಆಗ ರಮೇಶ್​ಕುಮಾರ್​ ಅವರು, “ಬೇಡ… ಬೇಡ… ಅವರು ಇಲ್ಲಿಗೆ ಬೇಕು. ಇಲ್ಲೇ ಇರಬೇಕು,” ಎಂದು ಹೇಳುವ ಮೂಲಕ ಶ್ರೀರಾಮುಲು ಅವರ ಕಾಲೆಳೆದರು.

Leave a Reply

Your email address will not be published. Required fields are marked *

Back To Top