Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಮಧ್ಯಪ್ರದೇಶದಲ್ಲಿ ಪೆಟ್ರೋಲ್​ ವ್ಯಾಟ್​ ಭಾರಿ ಕಡಿತವಾಯ್ತು! ಕರ್ನಾಟಕದಲ್ಲಿ?

Friday, 13.10.2017, 12:09 PM       No Comments

ಭೋಪಾಲ್: ಮಧ್ಯಪ್ರದೇಶದಲ್ಲಿ ಡೀಸೆಲ್ ಮೇಲೆ ವ್ಯಾಟ್ ದರವನ್ನು ಶೇ 3ರಷ್ಟು ಮತ್ತು ಪೆಟ್ರೋಲ್​ ಮೇಲೆ ಶೇ 5ರಷ್ಟು ಭಾರಿ ಪ್ರಮಾಣದಲ್ಲಿ ಕಡಿತಗೊಳಸಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್ ಹೇಳಿದ್ದಾರೆ.

ದೀಪಾವಳಿಗೆ ಬೊಂಬಾಟ್ ಆಫರ್:
ಇಂದು ಶುಕ್ರವಾರ ಮಧ್ಯ ರಾತ್ರಿಯಿಂದಲೇ ಇದು ಜಾರಿಗೆ ಬರಲಿದ್ದು, ಇದರಿಂದ ಡೀಸೆಲ್ ಮತ್ತು ಪೆಟ್ರೋಲ್ ದರಗಳು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿಮೆ ಮಾಡುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಬೆನ್ನಲ್ಲೇ ಗುಜರಾತ್,ಮಹಾರಾಷ್ಟ್ರ,ಉತ್ತರಾಖಂಡ ಹಾಗೂ ಮಧ್ಯಪ್ರದೇಶ ರಾಜ್ಯಗಳು ಬೆಲೆಯನ್ನು ಇಳಿಸಿವೆ.

ಗುಜರಾತ್ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು  ಈ ವಾರದ ಪ್ರಾರಂಭದಲ್ಲಿಯೇ ಕಡಿಮೆ ಮಾಡಿದ್ದವು. ಗುಜರಾತ್ ಸರ್ಕಾರ ಶೇ 4ರಷ್ಟು ವ್ಯಾಟ್​ ದರ ಕಡಿಮೆ ಮಾಡಿತ್ತು ಮತ್ತು ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ಪ್ರತಿ ಲೀಟರ್​ಗೆ 2 ರೂಪಾಯಿ ಹಾಗೂ ಡೀಸೆಲ್​ 1 ರೂಪಾಯಿ ಕಡಿಮೆ ಮಾಡಿತ್ತು. ಉತ್ತರಾಖಂಡನಲ್ಲಿಯೂ ವ್ಯಾಟ್​ ಹಾಗೂ ಸೆಸ್​ ದರ ಸೇರಿ ಪೆಟ್ರೋಲ್​ ಹಾಗೂ ಡೀಸೆಲ್​ ಮೇಲೆ ತಲಾ ಶೇ 2 ರಷ್ಟು ಬೆಲೆ ಕಡಿತಗೊಳಿಸಲಾಗಿತ್ತು. ಮಧ್ಯಪ್ರದೇಶ ಸರ್ಕಾರ ಕೂಡ ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಿದೆ. ಆದರೆ ಕರ್ನಾಟಕ ಮಾತ್ರ ಇಂತಹದೊಂದು ಸುದ್ದಿ ಕೇಳಲು ಕಾತರಿಸುತ್ತ ಕುಳಿತಿದೆ.

ಮುಂದುವರೆದ ರಾಜ್ಯದ ಜನರ ನಿರಾಸೆ:
ಬುಧುವಾರದಂದು ನಮ್ಮ ರಾಜ್ಯದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್​ ಬೆಲೆ ಕಡಿಮೆ ಮಾಡ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಕಡ್ಡಿ ತುಂಡು ಮಾಡಿದಂತೆ, ಬೆಲೆ ಇಳಿಸಲು ಸಾಧ್ಯವಿಲ್ಲ. ಬೇಕಿದ್ದರೆ ಕೇಂದ್ರ ಸರ್ಕಾರವನ್ನೆ ಕೇಳಿ ಎಂದು ಹೇಳಿದ್ದರು. ನಮ್ಮ ರಾಜ್ಯದಲ್ಲಿಯೂ ಕೂಡ ಬೆಲೆ ಕಡಿಮೆ ಆಗಬಹುದು ಎಂದು ರಾಜ್ಯದ ಜನತೆ ನಿರೀಕ್ಷಿಸಿತ್ತು ಆದರೆ ಅದು ಹುಸಿಯಾಗಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top