Friday, 20th April 2018  

Vijayavani

ಬಿಜೆಪಿ ಅಭ್ಯರ್ಥಿಗಳ 3 ನೇ ಪಟ್ಟಿ ರಿಲೀಸ್​- 59 ಅಭ್ಯರ್ಥಿಗಳ ಹೆಸರು ಪ್ರಕಟ- ವರುಣಾ, ಬಾದಾಮಿ ಇನ್ನೂ ನಿಗೂಢ        ಜೆಡಿಎಸ್​ನಿಂದ ಸೆಕೆಂಡ್​ ಲಿಸ್ಟ್​ ರಿಲೀಸ್​- ಕೈ, ಕಮಲ ರೇಬಲ್​ಗಳಿಗೆ ಮಣೆ- 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ        ಎಚ್​ಡಿಕೆ ಆಸ್ತಿ ವಿವರ ಘೋಷಣೆ- ಕುಮಾರಸ್ವಾಮಿ 12 ಕೋಟಿ ಒಡೆಯ- ಗುತ್ತೇದಾರ್​ಗಿಂತ ಪತ್ನಿ ಶ್ರೀಮಂತೆ        ನಟಿ ಉಮಾಶ್ರೀ ಆಸ್ತಿ ವಿವರ ಘೋಷಣೆ- ಸಾಕವ್ವ 1 ಕೆ.ಜಿ ಚಿನ್ನಾಭರಣದ ಒಡತಿ- ಅವಲಂಬಿತರು ಯಾರು ಇಲ್ಲವೆಂದು ಪ್ರಮಾಣಪತ್ರ        ಚಾಮುಂಡೇಶ್ವರಿಯಲ್ಲಿ ಸಿಎಂ, ವರುಣಾದಲ್ಲಿ ಯತೀಂದ್ರ- ಅಪ್ಪ-ಮಗ ನಾಮಪತ್ರ ಸಲ್ಲಿಕೆ- ಭಾರಿ ಬೆಂಬಲಿಗರ ಜತೆ ತೆರಳಿ ನಾಮಿನೇಷನ್​​​​​​        ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ- ಮನೆಗೆ ಹೋಗಲು ವರುಣನ ಅಡ್ಡಿ- ಸಂಜೆಯ ಮಳೆಗೆ ವಾಹನ ಸವಾರರು ಕಂಗಾಲು       
Breaking News

ಒಡೆದಾಳುವ ನೀತಿಗೆ ತಕ್ಕಪಾಠ

Saturday, 31.03.2018, 11:37 PM       No Comments

ಚಿಕ್ಕಮಗಳೂರು: ರಾಜ್ಯ ಸರ್ಕಾರ ವೀರಶೈವ ಲಿಂಗಾಯತರನ್ನು ಪ್ರತ್ಯೇಕಿಸಿ ಒಡೆದಾಳುವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಮಿನಿ ವಿಧಾನಸೌಧದ ಆವರಣದಿಂದ ಬೆಳಗ್ಗೆ 11.30ಕ್ಕೆ ಹೊರಟು ಆಜಾದ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್, ಪ್ರಧಾನ ಕಾರ್ಯದರ್ಶಿ ಎನ್.ಈಶ್ವರಪ್ಪ ಕೋಟೆ ಮಾತನಾಡಿ, ವೀರಶೈವ ಲಿಂಗಾಯತ ಎಂಬ ಹೆಸರಿನಲ್ಲಿ ಅಲ್ಪಸಂಖ್ಯಾತರ ಸ್ಥಾನಮಾನ ಹಾಗೂ ಪ್ರತ್ಯೇಕ ಧರ್ಮದ ಬಗ್ಗೆ ಮಾಡಿರುವ ಶಿಫಾರಸುಗಳನ್ನು ಮರು ಪರಿಶೀಲಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಗುರು ವಿರಕ್ತರಿಂದ ಲಿಂಗದೀಕ್ಷೆ ಪಡೆದು ಪ್ರತಿದಿನವೂ ಲಿಂಗಪೂಜೆ ಮಾಡುವ ವೀರಶೈವ ಲಿಂಗಾಯತರು ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮಗೆ ಹಲವು ಮಠಗಳಿದ್ದರೂ ನಮ್ಮ ಆಚರಣೆ ಒಂದೇ ಆಗಿದೆ. ಈ ಬಗ್ಗೆ ಈಗಾಗಲೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಹಲವು ಮಠಾಧಿಶರು ಮನವರಿಕೆ ಮಾಡಿಕೊಟ್ಟಿದ್ದಾರೆ. ನಮಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಾಗ ಒಟ್ಟಾಗಿ ಪರಿಗಣಿಸಬೇಕು ಎಂದು ಮನವಿ ಸಲ್ಲಿಸಿದ್ದರೂ ಸರ್ಕಾರ ಅದನ್ನು ಪರಿಗಣಿಸದೆ ವೀರಶೈವ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.

ಮಂತ್ರಿಮಂಡಲದಲ್ಲಿ ಈ ಕುರಿತು ನಿರ್ಣಯಿಸುವಾಗ ವೀರಶೈವ ಲಿಂಗಾಯತರಲ್ಲಿ ವ್ಯತ್ಯಾಸ ಬಿಂಬಿಸಿ ನಮ್ಮಲ್ಲಿ ಒಡಕುಂಟು ಮಾಡಲಾಗಿದೆ. ಧರ್ಮ ಒಡೆದವರು ಯಾರೂ ಉಳಿಯಲು ಸಾಧ್ಯವಿಲ್ಲ. ಸರ್ವನಾಶವಾಗುತ್ತಾರೆ ಎಂಬುದಕ್ಕೆ ಇತಿಹಾಸವೇ ಸಾಕ್ಷಿ. ವೀರಶೈವ ಲಿಂಗಾಯತ ಸಮಾಜವನ್ನು ವಿಭಜಿಸುವ ಯಾವುದೇ ಸರ್ಕಾರ, ಪಕ್ಷಗಳಿರಬಹುದು. ಸರ್ವನಾಶವಾಗುವುದು ಖಚಿತ ಎಂದು ಎಚ್ಚರಿಸಿದರು.

ಶತಮಾನಗಳಿಂದಲೂ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಆಶೋತ್ತರಗಳನ್ನು ಒಳಗೊಂಡ ಜಗದ್ಗುರು ಪಂಚಾಚಾರ್ಯರು ಹಾಗೂ ವಿಶ್ವಗುರು ಬಸವಣ್ಣನವರ ಮಾರ್ಗದಲ್ಲಿ ತಾವು ಅನ್ಯ ಸಮಾಜದೊಂದಿಗೆ ಅನ್ಯೋನ್ಯತೆಯಿಂದ ಮಾದರಿಯಾಗಿ ನಡೆದುಕೊಂಡು ಬಂದಿದ್ದೇವೆ. ಸರ್ಕಾರ ಈ ಸಮಾಜವನ್ನೇ ಬೇರ್ಪಡಿಸುವ ಕೆಲಸಕ್ಕೆ ಕೈಹಾಕಿದೆ ಎಂದು ದೂರಿದರು.

ನಮ್ಮನ್ನು ಒಡೆದಾಳುವ ನೀತಿಯೊಂದಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದಾಗಿ ನಿರ್ಣಯಿಸಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಕಳುಹಿಸಿದೆ. ಈ ತಂತ್ರದ ಹಿಂದೆ ನಮ್ಮನ್ನು ಒಡೆದು ಬಲಹೀನಗೊಳಿಸುವ ಹುನ್ನಾರ ಅಡಗಿದೆ. ಈ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತೆಗೆದುಕೊಂಡಿರುವ ನಿರ್ಣಯ ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ವೀರಶೈವ ಲಿಂಗಾಯತ ಒಂದೇ ಎನ್ನುವ ಘೊಷಣೆಗಳೊಂದಿಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ವೀರಶೈವ ಲಿಂಗಾಯತರಲ್ಲಿ ಹಲವು ಪಂಗಡಗಳಿದ್ದರೂ ಎಲ್ಲರೂ ಒಂದೇ. ಗುರುಗಳಿಂದ ದೀಕ್ಷೆ ವಿಧಿ ವಿಧಾನ ಪಡೆದುಕೊಂಡವರು. ದಯೆಯೇ ಧರ್ಮದ ಮೂಲವಯ್ಯ ಎನ್ನುವ ಹಿತವಚನದಂತೆ ಬದುಕುತ್ತಿದ್ದು, ಇಂತಹ ಧರ್ಮ ಪ್ರತ್ಯೇಕಿಸಲು ಹೊರಟವರು ತಕ್ಕ ಪಾಠ ಕಲಿಯುತ್ತಾರೆ.

| ಎಚ್.ಎಂ.ಲೋಕೇಶ್, ವೀರಶೈವ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ

Leave a Reply

Your email address will not be published. Required fields are marked *

Back To Top