Friday, 25th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ವೀರಶೈವ ಮಹಾಸಭಾದಿಂದ ಧರ್ಮ ಜಾಗೃತಿ ಜಾಥಾ

Wednesday, 25.04.2018, 9:00 AM       No Comments

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಧರ್ಮಜಾಗೃತಿ, ಮತದಾನದ ಅರಿವು ಮೂಡಿಸಲು ಧರ್ಮ ಜಾಗೃತಿ ಜಾಥಾ ನಡೆಯಸಲು ಯೋಜನೆ ರೂಪಿಸಿದ್ದು, ಜಾಥಾದ ರೂಟ್​ ಮ್ಯಾಪ್​ ಅನ್ನು ಸಿದ್ಧಪಡಿಸಿದೆ.

ಮೇ ಮೊದಲ ವಾರದಲ್ಲಿ ರಾಜ್ಯದ 5 ಕಡೆಗಳಿಂದ ಆರಂಭವಾಗಲಿರುವ ಜಾಥಾ ಮೇ. 8 ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮುಕ್ತಾಯವಾಗಲಿದೆ. ಬಸವ ಕಲ್ಯಾಣ, ಕೂಡಲ ಸಂಗಮ, ಬೆಳಗಾವಿ, ಚಾಮರಾಜನಗರ ಮತ್ತು ಕೋಲಾರದಿಂದ ಜಾಥಾ ಆರಂಭಗೊಳ್ಳಲಿದೆ.

ಲಿಂಗಾಯತ ಮತ ವಿಭಜನೆ ತಡೆಯುವ ಉದ್ದೇಶದಿಂದ ಜಾಥಾ ಆಯೋಜಿಸಲಾಗಿದ್ದು, ಜಾಥಾದಲ್ಲಿ ಮಹಾಸಭಾದ ಪದಾಧಿಕಾರಿಗಳು ಮತ್ತು ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

Back To Top