Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಹಿರಿಯ ಬಹುಭಾಷಾ ನಟಿ ಕೃಷ್ಣ ಕುಮಾರಿ ನಿಧನ

Wednesday, 24.01.2018, 11:22 AM       No Comments

ಬೆಂಗಳೂರು: ಹಿರಿಯ ಬಹುಭಾಷಾ ನಟಿ ಕೃಷ್ಣ ಕುಮಾರಿ ಅವರು ಬುಧವಾರ ನಗರದಲ್ಲಿ ಮೃತಪಟ್ಟಿದ್ದಾರೆ.

ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಕೃಷ್ಣ ಕುಮಾರಿ ಅವರು ಬುಧವಾರ ಮುಂಜಾನೆ 6 ಗಂಟೆಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟಿ ಸಾಹುಕಾರ್​ ಜಾನಕಿ ಅವರ ಸಹೋದರಿ ಕೃಷ್ಣ ಕುಮಾರಿ ಅವರು ಕಳೆದ ಮೂರು ವರ್ಷಗಳಿಂದ ಮಗಳೊಂದಿಗೆ ಬೆಂಗಳೂರಿನ ಕನಕಪುರ ರಸ್ತೆಯ ಗುಬ್ನಾಳ್ಳದಲ್ಲಿ ನೆಲೆಸಿದ್ದರು.

60-80ರ ದಶಕದಲ್ಲಿ ದಕ್ಷಿಣ ಭಾರತದ ಸ್ಟಾರ್​ ನಟಿಯಾಗಿ ಕೃಷ್ಣಕುಮಾರಿ ಅವರು ಮಿಂಚಿದ್ದರು. ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಸುಮಾರು 230 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಅವರು ಡಾ. ರಾಜ್​ ಕುಮಾರ್​, ಎನ್​ಟಿಆರ್​, ಎಎನ್​ಆರ್​, ಶಿವಾಜಿ ಗಣೇಶನ್​ ಸೇರೆದಂತೆ ಹಲವು ಸ್ಟಾರ್​ ನಟರೊಂದಿಗೆ ಅಭಿನಯಿಸಿದ್ದರು.

ಕೃಷ್ಣ ಕುಮಾರಿ ಅವರು ಕನ್ನಡದ ಜಲದುರ್ಗ, ಭಕ್ತ ಕನಕದಾಸ, ಆಶಾ ಸುಂದರಿ, ಶ್ರೀ ಶೈಲಾ ಮಹಾತ್ಮೆ, ಸ್ವರ್ಣಗೌರಿ, ದಶಾವತಾರ, ಭಕ್ತ ಕಬೀರಾ, ಚಂದ್ರಕುಮಾರ ಸೇರಿದಂತೆ ಸಾಕಷ್ಟು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

ನಾಳೆ ಬ್ರಾಹ್ಮಣ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top