Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಡಿ.10ಕ್ಕೆ ಮಲ್ಯ ಹಣೆಬರಹ ನಿರ್ಧಾರ

Thursday, 13.09.2018, 2:07 AM       No Comments

ಲಂಡನ್: ಭಾರತೀಯ ಬ್ಯಾಂಕ್​ಗಳಿಂದ ಸಾಲ ಪಡೆದು ವಂಚಿಸಿ ಲಂಡನ್​ಗೆ ಹೋಗಿ ನೆಲೆಕಂಡುಕೊಂಡಿರುವ ಆರ್ಥಿಕ ವಂಚನೆಯ ಆರೋಪಿ, ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಕುರಿತ ಅಂತಿಮ ತೀರ್ಪು ಡಿ.10ಕ್ಕೆ ಹೊರಬೀಳಲಿದೆ. 9 ತಿಂಗಳ ವಿಚಾರಣೆ ಬಳಿಕ ಲಂಡನ್ ವೆಸ್ಟ್ ಮಿನ್​ಸ್ಟರ್ ಮುಖ್ಯ ಮ್ಯಾಜಿಸ್ಟ್ರೇಟ್ ಬುಧವಾರ ತೀರ್ಪು ಕಾಯ್ದಿರಿಸಿದ್ದಾರೆ.

ಅಂತಿಮ ವಿಚಾರಣೆ ಸಂದರ್ಭದಲ್ಲಿ ಮುಂಬೈನ ಆರ್ಥರ್ ರೋಡ್ ಜೈಲಿನ ವಿಡಿಯೋ ಚಿತ್ರೀಕರಣವನ್ನು ನ್ಯಾಯಾಧೀಶರು ಪರಿಶೀಲಿಸಿದ್ದಾರೆ. ಹಸ್ತಾಂತರ ಪ್ರಕ್ರಿಯೆ ಕುರಿತಂತೆ ಭಾರತೀಯ ತನಿಖಾ ಸಂಸ್ಥೆಗಳು, ಬ್ಯಾಂಕರ್​ಗಳು ಹಾಗೂ ವಿಜಯ್ ಮಲ್ಯ ಪರ ವಕೀಲರ ವಾದ-ಪ್ರತಿವಾದ ಆಲಿಸಿದರು.

ವಿಚಾರಣೆ ಸಂದರ್ಭದಲ್ಲಿ ಸಾಲ ಮರು ಪಾವತಿ ವಿಚಾರವನ್ನು ಮಲ್ಯ ಮತ್ತೆ ಪ್ರಸ್ತಾಪಿಸಿದ್ದಾರೆ. ಕರ್ನಾಟಕ ಹೈಕೋರ್ಟ್​ನಲ್ಲಿ ಈ ಕುರಿತ ಅರ್ಜಿ ಸಲ್ಲಿಸಿದ್ದೇನೆ. ಸಾಲ ಮರು ಪಾವತಿಗೆ ನಾನು ನೀಡಿರುವ ಪ್ರಸ್ತಾವನೆ ಒಪ್ಪಿಕೊಳ್ಳುವ ವಿಶ್ವಾಸವಿದೆ. ಜಾಗತಿಕ ಆರ್ಥಿಕ ಹಿಂಜರಿತದಿಂದ ಉದ್ಯಮದಲ್ಲಿ ನಷ್ಟವಾಗಿದೆ. ಇದರಲ್ಲಿ ಯಾವುದೇ ಹಗರಣವಾಗಿಲ್ಲ. ಈ ಕುರಿತು ಭಾರತೀಯ ಅಧಿಕಾರಿಗಳು ಹಾಗೂ ಬ್ಯಾಂಕ್​ಗಳಿಗೆ ಮಾಹಿತಿ ನೀಡಿದ್ದೆ. ಆದರೆ ಯಾರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲಿಲ್ಲ ಎಂದು ಮಲ್ಯ ಪರ ವಕೀಲರು ಕೋರ್ಟ್​ಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಕಿಡಿ: ಮಲ್ಯ ಹೇಳಿಕೆ ಬಳಿಕ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ಎನ್​ಡಿಎ ಸರ್ಕಾರ ಹಾಗೂ ಮಲ್ಯ ನಡುವಿನ ಒಪ್ಪಂದ ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಆಗ್ರಹಿಸಿವೆ.

ಕೋರ್ಟ್​ನಲ್ಲಿ ಹೈಡ್ರಾಮಾ

ಇತ್ತೀಚೆಗೆ ಲಂಡನ್​ಗೆ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಲ್ಯ ಹಾಗೂ ಎನ್​ಡಿಎ ಸರ್ಕಾರದ ನಡುವಿನ ನಂಟಿನ ಬಗ್ಗೆ ಮಾತನಾಡಿದ್ದರು. ‘ಭಾರತ ಬಿಡುವ ಮೊದಲು ಎನ್​ಡಿಎ ಸರ್ಕಾರದಲ್ಲಿನ ಪ್ರಭಾವಿ ವ್ಯಕ್ತಿಯೊಬ್ಬರನ್ನು ಮಲ್ಯ ಭೇಟಿ ಮಾಡಿದ್ದರು, ಆದರೆ ಅವರ ಹೆಸರು ಹೇಳುವುದಿಲ್ಲ’ ಎಂದು ರಾಹುಲ್ ಆರೋಪಿಸಿದ್ದರು. ಈ ಆರೋಪಕ್ಕೆ ಪೂರಕವಾಗಿ ಮಲ್ಯ ಅವರೇ ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ ಜೇಟ್ಲಿ ಅವರನ್ನು ಅನೌಪಚಾರಿಕವಾಗಿ ಭೇಟಿಯಾಗಿದ್ದೆ. ಲಂಡನ್​ಗೆ ಹೋಗುವ ವಿಚಾರವನ್ನು ತಿಳಿಸಿದ್ದೆ.

| ವಿಜಯ್ ಮಲ್ಯ ಉದ್ಯಮಿ

ಮಲ್ಯ ಲೋಕಸಭೆ ಮೊಗಸಾಲೆಯಲ್ಲಿ ನನ್ನನ್ನು ಅನೌಪಚಾರಿಕವಾಗಿ ಭೇಟಿ ಮಾಡಿದ್ದು ನಿಜ. ಸಾಲ ಮರು ಪಾವತಿಯ ಬಗ್ಗೆ ಬ್ಯಾಂಕರ್​ಗಳ ಜತೆ ಮಾತನಾಡಿ ಎಂದಷ್ಟೇ ಹೇಳಿದ್ದೆ.

| ಅರುಣ್ ಜೇಟ್ಲಿ ಹಣಕಾಸು ಸಚಿವ

Leave a Reply

Your email address will not be published. Required fields are marked *

Back To Top