Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ

Tuesday, 13.03.2018, 4:22 PM       No Comments

ವಿಜಯಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಅದೃಷ್ಟವಶಾತ್‌ ಒಂದು ಮಗು ಘಟನೆಯಿಂದ ಪಾರಾಗಿದ್ದು, ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ನಿನ್ನೆ ತಡರಾತ್ರಿ ರೈಲಿಗೆ ತಲೆಕೊಟ್ಟು ಮಕ್ಕಳೊಂದಿಗೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರು ಇಂಡಿ ತಾಲೂಕಿನ ಸಾತಪುರ ಗ್ರಾಮದವರು. ಮೃತ ಗೃಹಿಣಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ಉಳಿದವರ ಹೆಸರು ತಿಳಿದು ಬಂದಿಲ್ಲ.

ಸ್ಥಳಕ್ಕೆ ರೈಲ್ವೆ ಇಲಾಖೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Back To Top