Monday, 18th June 2018  

Vijayavani

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ - ಕೆಲವೇ ಕ್ಷಣಗಳಲ್ಲಿ ಮೋದಿ, ಎಚ್​ಡಿಕೆ ಭೇಟಿ - ಕುತೂಹಲ ಕೆರಳಿಸಿದ ಮಾತುಕತೆ        ಸಮುದ್ರ ತೀರದಲ್ಲಿ ವಿಹಾರಕ್ಕೆ ಹೋದಾಗ ಅನಾಹುತ - ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರುಪಾಲು - ಗೋವಾದಲ್ಲಿ ದುರಂತ        ಶಾಸಕಿ, ಸಚಿವೆ ಮಧ್ಯೆ ಸೇವೆಯ ಸಮರ - ಅಪಾರ್ಥ ಬೇಡವೆಂದ ಲಕ್ಷ್ಮಿ ಹೆಬ್ಬಾಳ್ಕರ್ - ಜಯಮಾಲಾಗೆ ಹೊಗಳಿಕೆ        ಅಧಿಕಾರಕ್ಕೆ ಬಂದು ತಿಂಗಳಾದ್ರೂ ಭರವಸೆ ಈಡೇರಿಲ್ಲ - ಅಪ್ಪ-ಮಗ ರೈತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ - ಬಿಎಸ್​ವೈ ಕಿಡಿ        ರಾಜ್ಯಕ್ಕೆ ಎಚ್​​ಡಿಕೆ ಸಿಎಂ, ನನಗೆ ಸಿದ್ದು ಸಿಎಂ - ಸಚಿವನಾಗಲು ಸಿದ್ದರಾಮಯ್ಯರೇ ಕಾರಣ - ಸಚಿವ ಪುಟ್ಟರಂಗಶೆಟ್ಟಿ        ಪೋಷಕರ ಡಾಟಾ ಲೀಕ್​ ಆರೋಪ - ಬಾಲ್ಡ್​​​ವಿನ್​ ಶಾಲೆ ಮಾನ್ಯತೆ ರದ್ದಿಗೆ ಶಿಫಾರಸು       
Breaking News

ಸಾಲ ನೀಡಲು ವಿಳಂಬ: ಬ್ಯಾಂಕ್‌ ಮ್ಯಾನೇಜರ್‌ ಮೇಲೆ ಹಲ್ಲೆಗೆ ಯತ್ನ

Thursday, 14.09.2017, 9:43 AM       No Comments

ವಿಜಯಪುರ: ಬೆಳೆ ಸಾಲ ನೀಡಲು ವಿಳಂಬ ಮಾಡಿದ್ದಕ್ಕೆ ಸಿಟ್ಟಿಗೆದ್ದ ರೈತರೊಬ್ಬರು ಬ್ಯಾಂಕ್​ ಮ್ಯಾನೇಜರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.

ಬ್ಯಾಂಕಿನವರು ಬೆಳೆ ಸಾಲ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ಕನ್ನೊಳ್ಳಿ ಗ್ರಾಮದ ರೈತ ಗುರುಲಿಂಗಪ್ಪ ಅವರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್​ ಅಶೋಕ್​ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಾಗಿ ವಿಜಯವಾಣಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಗುರುಲಿಂಗಪ್ಪ ಮೂಡಲಿ ಹಾಗೂ ಆತನ ಸಹೋದರ ಗುರುಸಿದ್ದಪ್ಪ ಮೂಡಗಿ ಇಬ್ಬರ ನಡುವೆ 8 ಎಕರೆ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಅದಕ್ಕಾಗಿ ಬೆಳೆ ಸಾಲವನ್ನು ಗುರುಲಿಂಗಪ್ಪನಿಗೆ ನೀಡಬೇಡಿ ಎಂದು ಸಹೋದರ ಗುರುಸಿದ್ಧಪ್ಪ ಮ್ಯಾನೇಜರ್‌ಗೆ ಹೇಳಿದ್ದ.

ಇದರಿಂದ ರೋಸಿಹೋದ ಗುರುಲಿಂಗಪ್ಪ ಮ್ಯಾನೇಜರಿಗೆ ಕಪಾಳಮೋಕ್ಷ ಮಾಡಲು ಯತ್ನಿಸಿದ್ದಾನೆ. ಇನ್ನು ಗುರುಲಿಂಗಪ್ಪ ಹಲ್ಲೆಗೆ ಯತ್ನಿಸಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಂದಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top