Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಕಾರಿನ ಮೇಲೆ ಕಲ್ಲು ತೂರಾಟ

Saturday, 13.01.2018, 9:22 AM       No Comments

ಪಟನಾ: ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬಕ್ಸಾರ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಿತೀಶ್​ ಕುಮಾರ್​ ಅವರ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.

ನಿತೀಶ್​ ಕುಮಾರ್​ ಅವರು ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಗತಿ ಅರಿಯಲು ಸಮೀಕ್ಷಾ ಯಾತ್ರೆ ಕೈಗೊಂಡಿದ್ದು, ಇದರ ಭಾಗವಾಗಿ ಶುಕ್ರವಾರ ಬಕ್ಸಾರ್​​ನ ನಂದನ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ನಿತೀಶ್ ಅವರಿದ್ದ ಕಾರು ಹಾಗೂ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಿದ್ದಾರೆ.

ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸಿಎಂ ನಿತೀಶ್​ ಕುಮಾರ್​ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಪರಿಶೀಲನೆಗಾಗಿ ನಿತೀಶ್ ಕುಮಾರ್ ಡಿಸೆಂಬರ್ 12ರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

ಬಿಹಾರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಕರೆಂಟ್ ಕಟ್​, ನೀರಿನ ಸಮಸ್ಯೆ ಹೆಚ್ಚಾಗಿದೆ. ಸರ್ಕಾರ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಗ್ರಾಮಸ್ಥರು ಆರೋಪಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top