Friday, 21st September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಭಾರಿ ಮಳೆಗೆ ಲಕ್ಷಾಂತರ ರೂ. ನಷ್ಟ

Monday, 11.06.2018, 5:00 AM       No Comments

ವಿರಾಜಪೇಟೆ: ಕಳೆದರಡು ದಿನಗಳಿಂದ ವಿರಾಜಪೇಟೆ ವಿಭಾಗದ ಸುತ್ತಮುತ್ತ ಸುರಿಯುತ್ತಿರುವ ಭಾರಿ ಮಳೆಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಹಳ್ಳ ತೊರೆಗಳು ಉಕ್ಕಿ ಹರಿಯುತ್ತಿದ್ದು ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

ಪೊನ್ನಂಪೇಟೆ ಹೋಬಳಿ ಕುಟ್ಟಂದಿ ಗ್ರಾಮದ ಚಂದುರ ಪೂವಯ್ಯ ಅವರ ಮನೆ ಮೇಲೆ ಮರ ಬಿದ್ದು 50 ಸಾವಿರ ರೂ.ಗೂ ಅಧಿಕ ನಷ್ಟ ಉಂಟಾಗಿದೆ. ವಿರಾಜಪೇಟೆ ಹೋಬಳಿಯ ನಾಲ್ಕೇರಿ ಹೆಮ್ಮಾಡು ಗ್ರಾಮದ ಭದ್ರಕಾಳಿ ದೇವಸ್ಥಾನದ ಪೌಳಿಯ ಮೇಲೆ ಬೃಹತ್ ಮರ ಬಿದ್ದು ಅಂದಾಜು 1 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ. ಪಟ್ಟಣ ಪಂಚಾಯಿತಿಗೆ ಸೇರಿದ ನೆಹರುನಗರ ಪಂಪ್‌ಹೌಸ್ ಕಟ್ಟಡದ ಮೇಲೆ ಮರ ಬಿದ್ದು ಹಾನಿಯಾಗಿದೆ. ತೆಲುಗರ ಬೀದಿಯ ಸುಭಾಷ್ ಎಂಬುವರ ಮನೆ ಮೇಲೆ ಮರ ಬಿದ್ದು ಜಖಂಗೊಂಡಿದೆ.

ಭಾರಿ ಮಳೆಯಾಗುತ್ತಿರುವುದರಿಂದ ಪ.ಪಂ.ನಿಂದ 6 ಮಂದಿ ವಿಪತ್ತು ತಂಡ ರಚಿಸಲಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಈ ತಂಡ ಭೇಟಿ ನೀಡಿ ಪರಿಹಾರ ಕ್ರಮ ಕ್ಯೆಗೊಂಡಿದೆ. ಅಲ್ಲದೆ ನಿರಂತರವಾಗಿ ವಿದ್ಯುತ್ ಅಡಚಣೆ ಆಗುತ್ತಿರುವುದರಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಸಲು ಅಡಚಣೆ ಉಂಟಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೇಮ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top