Saturday, 16th December 2017  

Vijayavani

1. ಧಾರಾವಾಹಿ ನೋಡಿ ಹಂತಕನಾದ- ವೃದ್ಧನ ಕೊಲೆ ಮಾಡಿ 2 ಲಕ್ಷ ದೋಚಿದ- ಹತ್ಯೆಯಾದ ಎರಡನೇ ದಿನದಲ್ಲಿ ಆರೋಪಿ ಅಂದರ್ 2. ಎಂ.ಎಸ್. ಬಿಲ್ಡಿಂಗ್ ನವೀಕರಣ ವೇಳೆ ಅವಘಡ- ಗೋಡೆ ಕುಸಿದು ಕಾರ್ಮಿಕ ಸಾವು- ಕೂಲಿಗಾಗಿ ಬಂದು ಪ್ರಾಣ ಕಳೆದುಕೊಂಡ ಬಡಪಾಯಿ 3. ಮೊದಲ ಪತ್ನಿ ಇರೋವಾಗ್ಲೇ ಎರಡನೇ ಮದುವೆ- ಅಪ್ರಾಪ್ತೆಯೊಂದಿಗೆ ನಿರ್ವಾಹಕ ವಿವಾಹ- ಗುಂಡ್ಲುಪೇಟೆ ಕಂಡಕ್ಟರ್ ವಿರುದ್ಧ ಮೊದಲ ಪತ್ನಿ ದೂರು 4. ರವಿ ಬೆಳಗೆರೆಗೆ ಕೋರ್ಟ್ನಿಂದ ಮತ್ತೇ ರಿಲೀಫ್- ಮಧ್ಯಂತರ ಜಾಮೀನು ವಿಸ್ತರಣೆ- ಸೋಮವಾರದವರೆಗೆ ಬೆಳಗೆರೆ ಬಂಧಮುಕ್ತ 5. ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಬಿಜೆಪಿ ನಾಯಕರ ವಿರುದ್ಧವೇ ತಿರುಗಿಬಿದ್ದ ಮಲ್ಲಮ್ಮ- ರಕ್ಷಣೆ ಕೋರಿ ಮಹಿಳಾ ಆಯೋಗಕ್ಕೆ ದೂರು
Breaking News :

ವಿರಾಟ್​ ಕೊಹ್ಲಿ – ಅನುಷ್ಕಾ ಶರ್ಮಾ ಮದುವೆಗೆ ದಿನಗಣನೆ ಆರಂಭ ?

Wednesday, 06.12.2017, 6:33 PM       No Comments

<< ಇಟಲಿಯಲ್ಲಿ ಡಿ.​ 9, 10, 11 ರಂದು ತಾರಾ ದಂಪತಿ ವಿವಾಹ ಮಹೋತ್ಸವವಿದೆಯಂತೆ >>
ನವದೆಹಲಿ: ಹೆಚ್ಚು ಚರ್ಚಿತ ಲವ್ ಬರ್ಡ್ಸ್ ಆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಕಾಲಿಡುವ ಶುಭ ಗಳಿಗೆಗೆ ಕ್ಷಣಗಣನೆ ಆರಂಭವಾಗಿದೆ.

ಇದು ಒಂದೆಡೆ ಈ ಇಬ್ಬರೂ ಸೆಲೆಬ್ರಿಟಿಗಳ ಅಭಿಮಾನಿಗಳಿಗೆ ಸಿಹಿ ಸುದ್ದಿಯಾದರೆ, ಮತ್ತೊಂದೆಡೆ ದೀರ್ಘಕಾಲದ ಪ್ರೀತಿಗೆ ಅಧಿಕೃತ ಮುದ್ರೆಯೊತ್ತಿಕೊಂಡು ದಾಂಪತ್ಯ ಲೋಕದಲ್ಲಿ ವಿಹರಿಸುವ ಸಮಯಕ್ಕಾಗಿ ತಾರಾ ದಂಪತಿಗಳು ತವಕದಲ್ಲಿದ್ದಾರೆ.

ಡಿ.​ 9, 10 ಹಾಗೂ 11 ರಂದು ವಿರಾಟ್​ ಹಾಗೂ ಅನುಷ್ಕಾ ಜೋಡಿ ಸಪ್ತಪದಿ ತುಳಿಯಲಿದ್ದಾರೆ ಅನ್ನೋ ವಿಷಯ ಎಲ್ಲೆಡೆ ಹರಡಿದೆ. ಇಟಲಿಯಲ್ಲಿ ಮದುವೆ ನಡೆಯಲಿದೆ ಅಂತಲೂ ಹೇಳಲಾಗ್ತಿದೆ. ಸಿದ್ಧತೆಗಾಗಿ ನಾಳೆಯೇ ವಿರಾಟ್ ಇಟಲಿಗೆ ಹೊರಡಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ವಿರಾಟ್ ಕೊಹ್ಲಿ ಲಂಕಾ ವಿರುದ್ಧ ಏಕದಿನ ಹಾಗೂ ಟಿ-20 ಸರಣಿಗೆ ರೆಸ್ಟ್ ನೀಡಿ ಅಂತ ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದರು. ವಿರಾಟ್ ರೆಸ್ಟ್​​​ಗೆ ತೆರಳಿದ ಬಗ್ಗೆ ಸಾಕಷ್ಟು ಗುಸುಗುಸು ಶುರುವಾಗಿತ್ತು. ಇದೆಲ್ಲದಕ್ಕೂ ಈಗ ಉತ್ತರ ಸಿಗುವ ಸಾಧ್ಯತೆ ಇದೆ. ಈ ಮಧ್ಯೆ ದಕ್ಷಿಣ ಆಫ್ರಿಕಾ ಸರಣಿಗಾಗಿ ಅನುಷ್ಕಾಗೆ ವೀಸಾ ಪಡೆಯಲು ವಿರಾಟ್​ ಮನವಿ ಮಾಡಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top