Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಕಳಸಾ ನಾಲಾ ಮೂಲಕ ಗೋವಾ ಪಾಲಾಗುತ್ತಿದೆ ಮಲಪ್ರಭೆ ನೀರು

Monday, 17.07.2017, 11:42 AM       No Comments

ಬೆಳಗಾವಿ: ಮಹದಾಯಿ ನದಿ ನೀರಿಗಾಗಿ ಉತ್ತರ ಕರ್ನಾಟಕದಲ್ಲಿ ರೈತರು ಕಳೆದ 2 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೂ ನಮ್ಮ ರಾಜ್ಯದ ಪಾಲಿನ ನೀರು ನಿರಂತರವಾಗಿ ಗೋವಾಗೆ ಹರಿಯುತ್ತಿದೆ. ಇದರ ಜತೆಯಲ್ಲೇ ಗಾಯದ ಮೇಲೆ ಬರೆ ಎಂಬಂತೆ ನೀರಾವರಿ ಇಲಾಖೆ ಅಧಿಕಾರಿಗಳು ಮಲಪ್ರಭ ನದಿಗೆ ಹರಿಯಬೇಕಾದ ನೀರನ್ನೂ ಸಹ ಕಳಸಾ ಕಾಲುವೆ ಮೂಲಕ ಗೋವಾಗೆ ಹರಿಸುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದ ಕಣಕುಂಬಿ ಬಳಿ ಕಳಸಾ ನಾಲಾ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭೆ ಅಚ್ಚುಕಟ್ಟು ಪ್ರದೇಶದ ಮೂಲಕ ಮಲಪ್ರಭೆಗೆ ಹರಿಯುವ ನೀರು ಕಳಸಾ ಕಾಲುವೆ ಮೂಲಕ ಮಹದಾಯಿ ನದಿಗೆ ಸೇರುತ್ತಿದೆ. ಇದರಿಂದಾಗಿ ಮಲಪ್ರಭೆ ನದಿಗೆ ಸೇರಬೇಕಿದ್ದ ಸಣ್ಣಪುಟ್ಟ ಜರಿಗಳು ಗೋವಾಗೆ ಹರಿಯುತ್ತಿವೆ.

ಈ ಮೂಲಕ ಬರದಿಂದ ತತ್ತರಿಸುತ್ತಿರುವ ಮಲಪ್ರಭೆ ಅಚ್ಚುಕಟ್ಟು ಪ್ರದೇಶದ ಜನರಿಗೆ ನೀರಾವರಿ ಇಲಾಖೆ ಅಧಿಕಾರಿಗಳು ವಂಚನೆ ಮಾಡುತ್ತಿದ್ದಾರೆ.

(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top