Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ? ತನಿಖೆಗೆ ಆದೇಶ

Tuesday, 19.06.2018, 11:57 AM       No Comments

ಹುಬ್ಬಳ್ಳಿ: ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಯಾವಾಗ ಎಂದು ಪೊಲೀಸ್‌ ಪೇದೆ ಪೋಸ್ಟ್‌ ಮಾಡಿ ಇದೀಗ ಪೇಚಿಗೆ ಸಿಲುಕಿದ್ದಾರೆ.

ಹುಬ್ಬಳ್ಳಿ ನಗರ ಪೊಲೀಸ್‌ ಠಾಣೆ ಪೇದೆ ಅರುಣ್‌ ಡೊಳ್ಳಿನ್‌ ಎಂಬವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ? ಎನ್ನುವ ಪೋಸ್ಟ್‌ ಶೇರ್‌ ಮಾಡಿದ್ದಾರೆ.

ಸರ್ಕಾರ ರಚನೆಯಾಗಿ 18 ದಿನಗಳು ಕಳೆದರೂ ರೈತರ ಸಾಲಮನ್ನಾ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಕಾಂಗ್ರೆಸ್- ಜೆಡಿಎಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರ ರೀತಿ ಪ್ರಚಾರ ಮಾಡುತ್ತಿರುವ ಪೇದೆ ಈ ಹಿಂದೆ ಕೂಡಾ ಹಲವಾರು ವಿಡಿಯೋ ಗಳನ್ನು ಶೇರ್ ಮಾಡಿದ್ದಾರೆ. ಪೇದೆಯ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಪೋಸ್ಟ್‌ ಕುರಿತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ ಗರಂ ಆಗಿದ್ದಾರೆ. ಪೋಸ್ಟ್‌ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಎಸ್‌ಪಿಗೆ ಪರಮೇಶ್ವರ್ ಸೂಚಿಸಿದ್ದಾರೆ.

ಶಹರ ಠಾಣೆಯ ಪೊಲೀಸ್ ಪೇದೆ ಅರುಣ್ ಡೊಳ್ಳಿನ್‌ನನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎಂ.ಎನ್. ನಾಗರಾಜ್ ಆದೇಶ ಹೊರಡಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top