Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಕಾಡಾನೆಗಳ ಅಟ್ಟಹಾಸಕ್ಕೆ ಕಾಫಿ ತೋಟ ಹಾಗೂ ಭತ್ತದ ಬೆಳೆ ನಾಶ

Sunday, 01.10.2017, 9:37 AM       No Comments

ಹಾಸನ: ಕಾಡಾನೆಗಳ ಅಟ್ಟಹಾಸಕ್ಕೆ ಕಾಫಿ ತೋಟ ಹಾಗೂ ಭತ್ತದ ಬೆಳೆ ಧ್ವಂಸವಾದ ಘಟನೆ ಇಲ್ಲಿನ ಆಲೂರು ತಾಲೂಕಿನ ಕಾಡ್ಲೂರಿನಲ್ಲಿ ನಡೆದಿದೆ. ಐದಕ್ಕೂ ಹೆಚ್ಚು ಕಾಡಾನೆಗಳು ತೋಟಕ್ಕೆ ದಾಳಿ ಮಾಡಿ ಬೆಳೆ ನಾಶ ಮಾಡಿವೆ.

ಅರಣ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪ್ರಾದೇಶಿಕ ಅರಣ್ಯ ಅಧಿಕಾರಿ ಹೇಮಂತ್, ಅರಣ್ಯ ರಕ್ಷಕ ವೆಂಕಟೇಶ್ ಸೇರಿ ಆರು ಸಿಬ್ಬಂದಿಗೆ ಗ್ರಾಮಸ್ಥರು ಅಹೋರಾತ್ರಿ ದಿಗ್ಬಂಧನ ಹಾಕಿದ್ದಾರೆ.

ಬೆಳೆನಾಶಕ್ಕೆ ಸೂಕ್ತ ಬೆಳೆಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಉಪ ಅರಣ್ಯ ಅಧಿಕಾರಿ ಬರುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಆನೆಗಳ ದಾಳಿಯಿಂದ ಕಾಡ್ಲೂರಿನ ಎಚ್.ಎಸ್.ಮೋಹನ್ ಎಂಬುವರ ೨ ಎಕರೆ, ಐಬಿಸಿ ಎಸ್ಟೇಟ್‌ನ ಹತ್ತು ಎಕರೆ ಹಾಗೂ ಐದೂರಿನ ರಾಮಚಂದ್ರ ಎಂಬುವರ ಕಾಫಿ ತೋಟ ನಾಶವಾಗಿದೆ.(ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top