Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News

ವಿಪಕ್ಷಗಳ ಮಹಾಮೈತ್ರಿ ಸೇರುವುದಿಲ್ಲ ಎಂದ ಕೇಜ್ರಿವಾಲ್​

Friday, 10.08.2018, 12:18 PM       No Comments

ಜಿಂದ್​ (ಹರಿಯಾಣ): ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ವಿಪಕ್ಷಗಳು ಮಾಡಿಕೊಳ್ಳಲು ಉದ್ದೇಶಿಸಿರುವ ಮಹಾ ಮೈತ್ರಿ ಕೂಟದಲ್ಲಿ ಆಮ್​ ಆದ್ಮಿ ಪಕ್ಷ ಸೇರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಘೋಷಿಸಿದ್ದಾರೆ.

ಹರಿಯಾಣದಲ್ಲಿ ನಡೆದ ಪಕ್ಷದ ಸಭೆಯೊಂದರಲ್ಲಿ ಮಾತನಾಡಿರುವ ಕೇಜ್ರಿವಾಲ್​, ಈಗ ಮೈತ್ರಿ ಮಾಡಿಕೊಳ್ಳಲು ಬಯಸುತ್ತಿರುವ ವಿರೋಧ ಪಕ್ಷಗಳೆಲ್ಲವೂ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಪಾತ್ರ ವಹಿಸಿಲ್ಲ. ತಮ್ಮ ಪಕ್ಷ ಈ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದಿದ್ದಾರೆ.

ಅಲ್ಲದೆ, ಹರಿಯಾಣದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆಯ ಎಲ್ಲ ಸ್ಥಾನಗಳಿಗೂ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಸ್ವತಂತ್ರವಾಗಿ ಸ್ಪಧಿರ್ಸಲಿದೆ ಎಂದು ಹೇಳಿದ್ದಾರೆ.

ಮೋದಿ ವಿರುದ್ಧವೂ ಟೀಕೆ
ವಿರೋಧ ಪಕ್ಷಗಳ ಮೈತ್ರಿಯನ್ನು ಟೀಕಿಸುವ ವೇಳೆ ಕೇಜ್ರಿವಾಲ್​ ಮೋದಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿ ಬಾಕಿ ಇರುವ ಅಭಿವೃದ್ಧಿ ಕೆಲಸಗಳಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಹೊಣೆ ಎಂದಿರುವ ಕೇಜ್ರಿವಾಲ್​, ಜನರ ಕಲ್ಯಾಣಕ್ಕಾಗಿ ತಮ್ಮ ಸರ್ಕಾರ ತೆಗೆದುಕೊಂಡ ಪ್ರತಿಯೊಂದು ಕ್ರಮಗಳಿಗೂ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ ಎಂದೂ ಆರೋಪಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತು ಮೋದಿ ನೇತೃತ್ವದ ಸರ್ಕಾರ ಬಾರದಂತೆ ತಡೆಯಲು ವಿರೋಧ ಪಕ್ಷಗಳೆಲ್ಲವೂ ಮಹಾ ಮೈತ್ರಿ ಮಾಡಿಕೊಳ್ಳುವ ಇರಾದೆಯಲ್ಲಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್​ ಈ ಮೈತ್ರಿ ಕೂಟದ ಮುಂಚೂಣಿಯಲ್ಲಿದ್ದಾರೆ. ಇದಕ್ಕೆ ಕಾಂಗ್ರೆಸ್​ ಪಕ್ಷವೂ ಬೆಂಬಲವಾಗಿ ನಿಂತಿದ್ದು, ಈಗಾಗಲೇ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡುವ ಮಾತುಗಳನ್ನಾಡಿದೆ.

Leave a Reply

Your email address will not be published. Required fields are marked *

Back To Top