Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ಮಲ್ಯ ಸಾಲ ವಸೂಲಿಗೆ ತಾಂತ್ರಿಕ ಅಂಶ ತೊಡಕು

Thursday, 12.07.2018, 3:02 AM       No Comments

ಲಂಡನ್: ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ.ಗಳ ಸಾಲ ಮರುಪಾವತಿ ಮಾಡದೇ ವಿದೇಶದಲ್ಲಿ ನೆಲೆಸಿರುವ ವಿಜಯ್ ಮಲ್ಯರ ಲಂಡನ್ ಹಾಗೂ ವೇಲ್ಸ್​ನ ಆಸ್ತಿಗಳನ್ನು ವಶಕ್ಕೆ ಪಡೆಯಲು ನ್ಯಾಯಾಲಯ ಒಪ್ಪಿಗೆ ನೀಡಿರುವ ಬೆನ್ನಲ್ಲೇ ಬ್ಯಾಂಕುಗಳ ಒಕ್ಕೂಟಕ್ಕೆ ಹೊಸ ತಲೆನೋವು ಆರಂಭವಾಗಿದೆ.

ಮಲ್ಯ ಒಡೆತನದ 10,499 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲು ಮೇ 8ರಂದು ನ್ಯಾಯಾಲಯ ಬ್ರಿಟನ್ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿತ್ತು. ಆದರೆ ಲಂಡನ್ನಲ್ಲಿ ದೊಡ್ಡ ಪ್ರಮಾಣದ ಆಸ್ತಿಯನ್ನು ತಾವು ಹೊಂದಿಲ್ಲ ಎಂದು ಮಲ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೆಲ ಕಾರುಗಳು, ಆಭರಣಗಳು ಮಾತ್ರ ನನ್ನ ಹೆಸರಿನಲ್ಲಿವೆ. ಲಂಡನ್ ಮನೆ ತಾಯಿ ಹೆಸರಿನಲ್ಲಿದ್ದು, ಎಸ್ಟೇಟ್ ಮಕ್ಕಳ ಹೆಸರಲ್ಲಿವೆ. ಹೀಗಾಗಿ ಇವುಗಳನ್ನು ವಶಕ್ಕೆ ಪಡೆಯುವುದು ಕಾನೂನು ಪ್ರಕಾರ ಸಾಧ್ಯವಿಲ್ಲ ಎಂದು ಮಲ್ಯ ಹೇಳಿಕೊಂಡಿದ್ದಾರೆ. ಸಾಲ ವಸೂಲಾತಿಗೆ ಮುಂದಾಗಿರುವ ಬ್ಯಾಂಕುಗಳ ಒಕ್ಕೂಟಕ್ಕೆ ಇದು ಭಾರಿ ಹಿನ್ನಡೆ ಉಂಟುಮಾಡಿದೆ. ವಿದೇಶಗಳಲ್ಲಿ 782 ಕೋಟಿ ರೂ. ಮೊತ್ತದ ಆಸ್ತಿಗಳನ್ನು ಹೊಂದಿರುವುದಾಗಿ ವಿಜಯ್ ಮಲ್ಯ 2016ರಲ್ಲಿ ಸುಪ್ರೀಂಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದ್ದರು. ಆದರೆ ಪತ್ನಿ, ಮಕ್ಕಳು, ತಾಯಿ ಹೆಸರಲ್ಲಿ ಎಷ್ಟು ಆಸ್ತಿಯಿದೆ ಎಂದು ಅವರು ತಿಳಿಸಿರಲಿಲ್ಲ.

Leave a Reply

Your email address will not be published. Required fields are marked *

Back To Top