More

    ಕ್ರೀಡೆಯಿಂದ ಆರೋಗ್ಯ ವೃದ್ಧಿ

    ಬಳ್ಳಾರಿ : ಕ್ರೀಡೆಯು ಸ್ಪರ್ಧಾತ್ಮಕವಾಗಿದೆ, ಕೇವಲ ಆಟವಾಡುವುದಷ್ಟೇ ಅಲ್ಲ, ಆರೋಗ್ಯಕರವಾಗಿರಲು ಮತ್ತು ಸಕ್ರಿಯವಾಗಿರಲು ಸಹಾಯ ಮಾಡುತ್ತದೆ ಎಂದು ಪ್ಯಾರಿಸ್ ಒಲಂಪಿಕ್ಸ್ ನಾಮನಿರ್ದೇಶಿತ ಡಾ. ಎಚ್. ಡಿ. ಕೃಷ್ಣಪ್ಪ ಹೇಳಿದರು.
    ಇಲ್ಲಿನ ವಿಎಸ್‌ಕೆ ವಿವಿಯ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ, ಕರ್ನಾಟಕ ವಾಲಿಬಾಲ್ ಸಂಸ್ಥೆ , ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ
    ಉತ್ತಮ ಆಟಗಾರರನ್ನು ನಿರ್ಮಾಣ ಮಾಡುತ್ತವೆ. ಪರಿಶ್ರಮದ ಮೂಲಕ ತಂಡದ ಮೌಲ್ಯವನ್ನು ಹೆಚ್ಚಿಸುತ್ತವೆ. ಟೋಕಿಯೊನ ಒಲಂಪಿಕ್‌ನಿಂದ ಪ್ರಾರಂಭವಾದ ವಾಲಿಬಾಲ್ ಆಕರ್ಷಣೀಯ ಕ್ರೀಡೆಯಾಗಿದೆ. ವಾಲಿಬಾಲ್ ಒಲಂಪಿಕ್ಸ್ ಪ್ರವೇಶಿಸಲು 40 ವರ್ಷಗಳವರೆಗೆ ಕಾಯಬೇಕಾಯಿತು. ಕ್ರೀಡಾ ವ್ಯವಸ್ಥೆಯಲ್ಲಿ ಹಲವಾರು ಸಮಸ್ಯೆಗಳಿರುತ್ತವೆ. ಸಮಸ್ಯೆಗಳು ಸ್ಪರ್ಧೆಯ ಸ್ವರೂಪ ಪಡೆಯುತ್ತವೆ. ಪ್ರಸ್ತುತವಾಗಿ ಬ್ರೆಜಿಲ್, ಕ್ಯೂಬಾ ಮತ್ತು ಚೀನಾ ವಾಲಿಬಾಲ್ ಕ್ರೀಡೆಯಲ್ಲಿ ಹೆಚ್ಚು ಬೆಳೆದಿವೆ ಎಂದು ಹೇಳಿದರು.
    ವಿವಿ ಕುಲಪತಿ ಪ್ರೊ. ತಿಪ್ಪೇರುದ್ರಪ್ಪ ಜೆ. ಮಾತನಾಡಿ, ಕ್ರೀಡಾಪಟುಗಳು ಒಳ್ಳೆಯ ವರ್ತನೆಗಳನ್ನು ಅಳವಡಿಸಿಕೊಳ್ಳಬೇಕು. ಅವರ ವರ್ತನೆಗಳು ಕ್ರೀಡಾಪಟುಗಳನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತವೆ ಎಂದು ಕಿವಿ ಮಾತು ಹೇಳಿದರು.
    ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರ ಗೌಡ ಮಾತನಾಡಿದರು.
    ರಾಜ್ಯ ವಿವಿಧ ಜಿಲ್ಲೆಗಳಿಂದ ದೈಹಿಕ ಶಿಕ್ಷಕರು, ವೃತ್ತಿಬಾಂಧವರು ಹಾಗೂ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರಕ್ಕೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts