More

    ಚುನಾವಣೆ ಸಮರ್ಪಕವಾಗಿ ನಿರ್ವಹಿಸಿ

    ಚಿತ್ರದುರ್ಗ: ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಅತ್ಯಂತ ಮಹತ್ವದ ಸ್ಥಾನವಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್‌ಉಲ್ಲಾ ಷರೀಫ್ ಹೇಳಿದರು.
    ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಗರದ ಸಹಕಾರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಒಂದು ದಿನದ ವಿಶೇಷ ತರಬೇತಿ ಕಾರ‌್ಯಾಗಾರದಲ್ಲಿ ಮಾತನಾಡಿದರು.
    ಐದು ವರ್ಷಗಳ, ಎರಡು ವಾರ್ಷಿಕ ಮಹಾಸಭೆಗಳಿಗೆ ಹಾಜರಾದ ಸದಸ್ಯರು ಸಹಕಾರಿ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಈ ಚುನಾವಣೆಯನ್ನು ಅತ್ಯಂತ ಸಮರ್ಪಕವಾಗಿ ನಡೆಸಲು, ಕಾರ್ಯನಿರ್ವಾಹಕರಾದ ತಮ್ಮ ಜವಾಬ್ದಾರಿ ಹೆಚ್ಚಿರುತ್ತದೆ. ನಿಯಮಗಳು, ಕಾನೂನುಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದರು.
    ದೇಶಾದ್ಯಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವಹಿವಾಟು ಸಂಪೂರ್ಣವಾಗಿ ಗಣಕೀಕೃತವಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ 158 ಸಹಕಾರ ಸಂಘಗಳ ಪೈಕಿ 148 ಸಂಘಗಳಿಗೆ ಗಣಕೀಕೃತವಾಗಿವೆ. ಇದು ಸಹಕಾರ ಸಂಘಗಳೆಡೆ ಜನರಲ್ಲಿರುವ ನಂಬಿಕೆ ಮತ್ತು ವಿಶ್ವಾಸ ವೃದ್ಧಿಗೆ ಸಹಕಾರಿಯಾಗಿದೆ ಎಂದರು.
    ಕಾರ‌್ಯಕ್ರಮ ಉದ್ಘಾಟಿಸಿದ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಮಾತನಾಡಿ, ಮಹಾಮಂಡಳದಿಂದ ಇನ್ನಷ್ಟು ತರಬೇತಿ ಕಾರ‌್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕಾರ‌್ಯವೈಖರಿಯಲ್ಲಿ ದಕ್ಷತೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದರು.
    ಮುಖ್ಯಅತಿಥಿ ಜಿಂಕಲು ಬಸವರಾಜ್ ಮಾತನಾಡಿ, ಸಹಕಾರ ಸಂಘಗಳು ರೈತರು, ಬಡವರ ಮತ್ತು ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸಂಘಗಳ ಆರ್ಥಿಕ ಸದೃಢತೆಗೆ ಪೂರಕವಾಗಿ ಕೆಲಸ ಮಾಡಬೇಕು ಎಂದರು.
    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಂ.ದ್ಯಾಮಣ್ಣ ಮಾತನಾಡಿದರು. ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಎಸ್.ವಿ.ಬಸವರಾಜ್ ಉಪನ್ಯಾಸ ನೀಡಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ಸ್ವಾಗತಿಸಿದರು.
    ನಿರ್ದೇಶಕರಾದ ಜೆ.ಶಿವಪ್ರಕಾಶ್, ಮಾತೃಶ್ರೀ ಎನ್.ಮಂಜುನಾಥ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕ ಪಿ.ಅಂಜನಮೂರ್ತಿ, ಸಹಕಾರ ಸಂಘಗಳ ನಿರೀಕ್ಷಕರಾದ ಎಸ್.ಸಂಜಯ್‌ರಾಮ್, ರಾಮು, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಶಂಕರಮೂರ್ತಿ, ಎಂ.ಹಿಮಂತರಾಜ್ ಮತ್ತಿತರರು ಇದ್ದರು.
    ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ತರಬೇತಿ ಆಯೋಜಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts