More

    ಡೆಂಗ್ಯೂವಿನಿಂದ ಮರಣ ಹೊಂದದಂತೆ ಎಚ್ಚರ ವಹಿಸಿ

    ಬಾಗಲಕೋಟೆ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ರೋಗ ತಡೆಗೆ ಸೂಕ್ತ ಕ್ರಮವಹಿಸಿ ರೋಗಿ ಮರಣ ಹೊಂದಂತೆ ತಡೆಯಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಲಯ ಸಹಯೋಗದಲ್ಲಿ ಹಮ್ಮಿಕೊಂಡ ಡೆಂಗಿ ಹಾಗೂ ಚಿಕುಂಗುನ್ಯಾ ನಿಯಂತ್ರಣ ಪೋಸ್ಟರ ಬಿಡುಗಡೆ ಹಾಗೂ ಈಡೀಸ್ ಲಾರ್ವಾ ನಿರ್ಮೂಲನಾ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೆಂಗಳೂರು ನಗರದಲ್ಲಿ ಡೆಂಗಿ ಪ್ರಕರಣ ಕಂಡುಬಂದಿದ್ದು, ಮುಖ್ಯಮಂತ್ರಿಗಳು ಸಭೆ ಕರೆದು ಡೆಂಗಿ ರೋಗ ನಿಯಂತ್ರಣಕ್ಕೆ ಕ್ರಮವಹಿಸಲು ಸೂಚಿಸಿದ್ದಾರೆ ಎಂದರು.

    ಈಗಾಗಲೇ ಡೆಂಗಿ ನಿಯಂತ್ರಣಕ್ಕೆ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಅಭಿಯಾನದ ರೂಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರತಿ ಶುಕ್ರವಾರ ಆಶಾ ಕಾರ್ಯಕರ್ತರು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಸಿಬ್ಬಂದಿಗಳು ಸೇರಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವದಲ್ಲದೇ ರೋಗ ಮುನ್ಸೂಚನೆ ಹಾಗೂ ಲಕ್ಷಣ ತಿಳಿಸಬೇಕು. ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಬಹುದಾದ ಮಾಹಿತಿ ನೀಡುವುದು. ಶುದ್ದ ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶ ಪಡಿಸುವ ಬಗ್ಗೆ ಮಾಹಿತಿ ನೀಡುವ ಕೆಲಸವಾಗಬೇಕು ಎಂದರು.

    ಶೇಖರಣೆಗೊಂಡ ನೀರು ಉಪಯೋಗವಾಗುತ್ತಿರಬೇಕು. ನೀರು ನಿಲ್ಲದಂತೆ ನೋಡಬೇಕು. ಇಲ್ಲವಾದಲ್ಲಿ ಲಾರ್ವ ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ನೀರು ಸಂಗ್ರಹದ ಮೇಲೆ ಮುಚ್ಚುವ ವ್ಯವಸ್ಥೆ ಆಗಬೇಕು. ಈ ಕಾರ್ಯದಲ್ಲಿ ಗ್ರಾಮ ಪಂಚಾಯತ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕೈ ಜೋಡಿಸಬೇಕು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಲಾರ್ವ ಮೊಟ್ಟೆಗಳನ್ನು ತಿನ್ನುವ ಮೀನುಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಶಾಸಕ ಎಚ್.ವಾಯ್.ಮೇಟಿ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಆಯುಕ್ತ ರಣದೀಪ, ಎಂ.ಡಿ.ಎನ್.ಎಚ್.ಎಂ ನವೀನ ಭಟ್, ವಿವಿಧ ವಿಭಾಗದ ನಿರ್ದೇಶಕರಾದ ಡಾ.ಶರೀಪ, ಅನಂತ ದೇಸಾಯಿ, ಶ್ರೀನಿವಾಸ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts