More

    ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ: ಜಿ.ಎಲ್.ಮುದ್ದೇಗೌಡ

    ಹಾಸನ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜೂ.27 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್.ಮುದ್ದೇಗೌಡ ತಿಳಿಸಿದರು.
    ಇಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು. ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡರು ಉಪಸ್ಥಿತರಿರುವರು, ಜಯಂತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಪಟೇಲ್, ಮಾಜಿ ಸಚಿವ ಎಚ್.ಡಿ.ರೇವಣ್ಣ, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.
    ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಕೆ.ಧರಣಿದೇವಿ, ಮೈಸೂರು ವಿಭಾಗದ ಕನ್ನಡ ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ್, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಮೊದಲಾದವರು ಭಾಗಿಯಾಗಲಿದ್ದಾರೆ ಎಂದರು. ಇದೇ ವೇಳೆ ಪತ್ರಕರ್ತ ಹಾಗೂ ಲೇಖಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಗುರುರಾಜ್ ವಿಶೇಷ ಉಪನ್ಯಾಸ ನೀಡುವರು ಎಂದರು.
    ಈ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಶಿಕ್ಷಣ, ಮಾಧ್ಯಮ, ವೈದ್ಯಕೀಯ ಸೇರಿದಮತೆ ಇತರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 9 ಜನರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಎಸ್.ರಘುಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ನಗರಸಭೆ ಸದಸ್ಯ ನವೀನ್ ನಾಗರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts