More

    ಪ್ರತಿಭಟನಾ ನಿರತ ಕಾರ್ಯಕರ್ತೆ ಅಸ್ವಸ್ಥ

    ಕಲಬುರಗಿ: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥರಾದ ಘಟನೆ ಮಂಗಳವಾರ ನಡೆದಿದೆ. ಸರ್ಕಾರದ ನಿಯಮ ವಿರೋಧಿಸಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್ ನಿವಾಸದ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಬಿಸಿಲಿನ ತಾಪ ತಾಳದೆ ರೆಹೆಮತ್ ಕಾಲನಿ ನಿವಾಸಿ ಜಹೀರಾ ಉನ್ನೀಸ್ ಕುಸಿದು ಬಿದ್ದಿದ್ದಾರೆ. ತಕ್ಷಣ ಮಹಿಳೆಯನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    ಅಂಗನವಾಡಿ ಕೇಂದ್ರಗಳು ಮುಚ್ಚುವ ಭೀತಿ: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳು ಮುಚ್ಚುತ್ತವೆ. ಅಂಗನವಾಡಿ ಕಾರ್ಯಕರ್ತೆಯರ ಜೀವನ ಬೀದಿಗೆ ಬರುತ್ತದೆ ಎಂಬ ಒತ್ತಡದಿಂದ ಹಾಗೂ ಬಿಸಿಲಿನಿ ಬೇಗೆ ತಾಳದೆ ಅಸ್ವಸ್ಥರಾಗಿದ್ದಾರೆ. ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕಾರ್ಯಕರ್ತೆಯರು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts