More

    ಬಾಂಧವ್ಯ ಉತ್ತಮವಾಗಿದ್ದರೆ ಶಾಲೆಗಳು ಅಭಿವೃದ್ಧಿ

    ರಾವಂದೂರು: ಶಿಕ್ಷಕರು ಮತ್ತು ಪಾಲಕರ ಬಾಂಧವ್ಯ ಉತ್ತಮವಾಗಿದ್ದಾಗ ಮಾತ್ರ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅತ್ತಿಗೋಡು ಪ್ರೌಢಶಾಲೆಯ ಮುಖ್ಯಶಿಕ್ಷಕ ನಾಗಶೆಟ್ಟಿ ಅಭಿಪ್ರಾಯಪಟ್ಟರು.


    ಪಿರಿಯಾಪಟ್ಟಣ ತಾಲೂಕು ಮಹದೇಶ್ವರ ವಠದಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರ ಜತೆ ಪಾಲಕರು ಹಾಗೂ ಗ್ರಾಮಸ್ಥರು ಕೈಜೋಡಿಸಿದಾಗ ಅಂತಹ ಶಾಲೆಗಳು ಉತ್ತಮ ಶಾಲೆಗಳಾಗಿ ಹೊರಹೊಮ್ಮುತ್ತವೆ. ಶೈಕ್ಷಣಿಕ ಗುಣಮಟ್ಟವೂ ಉತ್ತಮವಾಗಿರುತ್ತವೆ ಎಂದರು.


    ಪ್ರಾಥಮಿಕ ಶಾಲಾ ಹಂತ ಮಕ್ಕಳ ಶೈಕ್ಷಣಿಕ ಬುನಾದಿಯ ಶಿಕ್ಷಣವಾಗಿದ್ದು, ಈ ಹಂತದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಾಗ ಮಕ್ಕಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದರು.


    ಬಿಆರ್‌ಪಿ ಶ್ರೀನಿಧಿ ಮಾತನಾಡಿ, ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು. \

    ಗ್ರಾಮದ ಹಿರಿಯರು ಹಾಗೂ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್, ಇಸಿಒ ಗಣೇಶ್, ಗ್ರಾಪಂ ಸದಸ್ಯ ರುದ್ರೇಶ್, ಗ್ರಾಪಂ ಮಾಜಿ ಉಪಾಧ್ಯಕ್ಷ ಹರೀಶ್, ಸದಸ್ಯ ಶಿವಣ್ಣ, ಮಣಿಯಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಪುಟ್ಟಸ್ವಾಮಿ, ಸಿಆರ್‌ಪಿ ಗುರುರಾಘವೇಂದ್ರ, ಮುಖ್ಯಶಿಕ್ಷಕ ಬಸವರಾಜು, ರೇವಣ್ಣ, ಶಿವಮೂರ್ತಿ, ಧರ್ಮರಾಜು, ಪ್ರಭುಶಂಕರ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts