More

    ಬೆಲೆ ಏರಿಕೆ ನಡೆಗೆ ಕನಸೇ ಗರಂ

    ಚಿತ್ರದುರ್ಗ: ಅಗತ್ಯ ವಸ್ತುಗಳ ಬೆಲೆ ಇಳಿಸಿ ರಾಜ್ಯದ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ ರ್ಕಾಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
    ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಪ್ರತಿಭಟಿಸಿದ ರ್ಕಾಯಕರ್ತರು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
    ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಸ್ಪರ್ಧೆಗೆ ಬಿದ್ದತಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಪೆಟ್ರೋಲ್, ಡೀಸೆಲ್ನೊಂದಿಗೆ ಈಗ ಹಾಲಿನ ಬೆಲೆ ಹೆಚ್ಚಿಸುವ ಮೂಲಕ ಸರ್ಕಾರ ಜನ ಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸರ್ಕಾರದ ನಡೆ ವಿದ್ಯಾರ್ಥಿ, ರೈತ, ಕಾರ್ಮಿಕ ವರ್ಗ ಸಹಿತ ಬಡಜನರಿಗೆ ಆಘಾತವನ್ನುಂಟು ಮಾಡಿದ್ದು, ಅಗತ್ಯ ವಸ್ತುಗಳ ಬೆಲೆ ಇಳಿಸುವಂತೆ ಒತ್ತಾಯಿಸಿ ಡಿಸಿ ಕಚೇರಿ ತಹಸೀಲ್ದಾರ್ ಸಂತೋಷ್ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.
    ಸೇನೆ ಜಿಲ್ಲಾಧ್ಯಕ್ಷ ಎಂ.ತಿಪ್ಪೇಸ್ವಾಮಿ, ತ್ಯಾಗರಾಜ್, ಶರೀಫ್, ಶಿವಣ್ಣ, ಫೈಜುಲ್ಲಾ, ಲಕ್ಷಿà್ಮಕಾಂತ್, ರಾಮು, ಅನಿಲ್, ಮಂಜುನಾಥ್,ನಂದಕುಮಾರ್, ಶಿವರಾಜ್, ಮಲ್ಲಿಕಾರ್ಜನ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts