More

    ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಖಂಡಿಸಿ: ಸರ್ಕಾರದ ವಿರುದ್ಧ ಪ್ರತಿಭಟನೆ

    ಹಾಸನ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಬೆಲೆ ಏರಿಕೆಯಿಂದ ಜನರು ತೊಂದರೆ ಆಗುತ್ತಿದ್ದು, ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಜು 02ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಎಚ್. ನಾರಾಯಣಗೌಡ ತಿಳಿಸಿದರು.
    ಸಿದ್ದರಾಮಯ್ಯ ಅವರು ದಲಿತರು, ಹಿಂದುಳಿದ ವರ್ಗದವರು, ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು. ಈಗ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅದೇ ಪ್ರತಿನಿತ್ಯ ಸಾರ್ವಜನಿಕರ ದೈನಂದಿನ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
    ಎಲ್ಲಾ ಇಲಾಖೆಯಲ್ಲಿ ಕೂಡ ಭ್ರಷ್ಟಾಚಾರ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ. ಎಂದು ಸುಳ್ಳು ಹೇಳಿಕೊಂಡು ಪ್ರತಿಭಟನೆ ನಡೆಸಿದರು. ಆದರೆ, ಈಗ ಹಗರಣಗಳ ಸರಮಾಲೆ ಇದ್ದರೂ, ಕೂಡ ಮುಖ್ಯಮಂತ್ರಿಗಳು ಮೌನ ವಹಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಣ ಹಗರಣ, ಅಂಬೇಡ್ಕರ್ ನಿಗಮದ 11000 ಕೋಟಿ ಹಣವನ್ನು ವಾಪಸ್ ಪಡೆದುಕೊಂಡಿದ್ದಾರೆ ಎಲ್ಲದರ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
    ರೈತರ ಜಮೀನಿನ ಪಹಣಿಯ ಬೆಲೆ 40ರೂ ಮತ್ತು ಜಮೀನಿನ ಮುದ್ರಾಂಕದ ಶುಲ್ಕ30%ರಷ್ಟು, ಹಾಲಿನ ದರ, ಪೆಟ್ರೋಲ್ ದರ ಹೀಗೆ ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಮೇಲೆ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರನ್ನ ಶೋಷಣೆ ಮಾಡುತ್ತಿದ್ದಾರೆ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಸುಳ್ಳು ಸಿದ್ದರಾಮಯ್ಯ ಅವರು ತಕ್ಷಣವೇ ತಮ್ಮ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.
    ಸುದ್ದಿಗೋಷ್ಠಿಯಲ್ಲಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹರ್ಷಿತ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಮುಖಂಡರಾದ ಶಕುನಿ ಗೌಡ, ಪಾಪಣ್ಣ, ನಟರಾಜ್ ಇದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts