More

    ಸುತ್ತಲಿನ ಪರಿಸರ ಸ್ವಚ್ಛವಾಗಿಡಿ

    ಬಳ್ಳಾರಿ : ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯ ಸ್ಥಳಗಳನ್ನು ಮುಕ್ತಿಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಹೇಳಿದರು.
    ಇಲ್ಲಿನ ಇಂದಿರಾನಗರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಈಡಿಸ್ ಸೊಳ್ಳೆ ನಿರ್ಮೂಲನ ದಿನದ ಅಂಗವಾಗಿ ಅರಿವು ಮೂಡಿಸಲು ಶುಕ್ರವಾರ ನಡೆದ ಡೆಂಗ್ಯೂ ನಿಯಂತ್ರಣ ಜಾಥಾದಲ್ಲಿ ಮಾತನಾಡಿದರು. ಮಹಾಮಾರಿ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ತಮ್ಮ ಮನೆಯ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗದಂತೆ ನೋಡಿಕೊಳ್ಳಬೇಕು ಎಂದರು.
    ಡಿಎಚ್ಒ ಡಾ.ರಮೇಶಬಾಬು ಮಾತನಾಡಿ, ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಅವು ಕಚ್ಚುತ್ತವೆ. ಜನ ಸಾಮಾನ್ಯರು 5-6 ದಿನಗಳಿಗೊಮ್ಮೆ ಶೇಖರಣೆ ಮಾಡಿಕೊಂಡ ನೀರಿನ ತೊಟ್ಟಿ, ಡ್ರಮ್, ಬ್ಯಾರೆಲ್ ಇತರೆ ನೀರಿನ ಸಂಗ್ರಹಾರಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣ ಕಡಿಮೆಯಿದ್ದು, ರೋಗ ಸಂಪೂರ್ಣ ನಿಯಂತ್ರಿಸಲು ಸಾರ್ವಜನಿಕರು ಇಲಾಖೆಯೊಡನೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
    ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಮಾತನಾಡಿದರು.
    ಬಳಿಕ ಮನೆ-ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ಲಾರ್ವಾ, ಈಜೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಯಿತು. ಡೆಂಗಿ ನಿಲ್ಲಿಸಿ ಎನ್ನುವ ಜಾಗೃತಿ ಭಿತ್ತಿಚಿತ್ರ ಪ್ರದರ್ಶಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts