More

    ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ಬೃಹತ್ ಪ್ರತಿಭಟನೆ

    ವಿಜಯಪುರ: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ.ಗಳ ಭ್ರಷ್ಟಾಚಾರ ಹಗರಣ ಖಂಡಿಸಿ ಬಿಜೆಪಿ ಎಸ್‌ಟಿ ಮೋರ್ಚಾ ನೇತೃತ್ವ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.

    ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ, ಬಸವೇಶ್ವರ ವೃತ್ತದ ಮಾರ್ಗವಾಗಿ ಜಿಲ್ಲಾಡಳಿತ ಕಚೇರಿ ತಲುಪಿ ಸಮಾವೇಶವಾಗಿ ಮಾರ್ಪಟ್ಟಿತ್ತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಪದಾಧಿಕಾರಿಗಳು ಘೋಷಣೆ ಮೊಳಗಿಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಮಾತನಾಡಿ, ದಲಿತರ ಕಲ್ಯಾಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅವರಿಗೇ ಅನ್ಯಾಯ ಮಾಡಿದೆ. ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಪರಿಶಿಷ್ಟ ಕಲ್ಯಾಣ ಮೀಸಲಿಟ್ಟದ್ದ 28 ಸಾವಿರ ಕೋಟಿ ಹಣ ದುರ್ಬಳಿಕೆ ಮಾಡಿದ್ದಾರೆ. ನಂತರ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಇಟ್ಟಿದ್ದ 187 ಕೋಟಿ ಹಣದಲ್ಲಿ 45 ಕೋಟಿ ರೂ. ನೆರೆಯ ತೆಲಂಗಾಣ ರಾಜ್ಯಕ್ಕೆ 9 ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಿ ಅದನ್ನು ತಮ್ಮ ಪಕ್ಷಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

    ಯೂನಿಯನ್ ಬ್ಯಾಂಕ್‌ನವರು ತಮ್ಮ ಬ್ಯಾಂಕ್‌ನಲ್ಲಾದ ಅವ್ಯವಹಾರ ಕುರಿತು ಸಿಬಿಐಗೆ ಪತ್ರ ಬರೆದರು. ಆದರೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಅದರಿಂದ ತನಿಖೆ ಮಾಡಿಸಿ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿದೆ ಎಂದು ಟೀಕಿಸಿದರು.

    ಸರ್ಕಾರದ ಖಜಾನೆ ಖಾಲಿಯಾಗಿದೆ. ಹಾಸ್ಟೆಲ್‌ಗಳಲ್ಲಿ ಹಾಸಿಗೆ-ದಿಂಬು, ಊಟಕ್ಕೆ ಆಹಾರವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡು ಆಗುತ್ತಿಲ್ಲ. ಆದ್ದರಿಂದ ಸರ್ಕಾರ ಪೆಟ್ರೋಲ್-ಡೀಸೆಲ್, ಹಾಲಿನ ದರ ಹೆಚ್ಚಿಸಿ ಜನರ ಜೀವನ ದುಃಸ್ತಿಗೆ ತಂದಿದೆ. 14 ಬಾರಿ ಬಜೆಟ್ ಮಂಡಿಸಿ ಹಣಕಾಸು ಇಲಾಖೆ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಹಣಕಾಸು ಸ್ಥಿತಿಗೆ ಅಧೋಗತಿ ಒಯ್ದಿದ್ದಾರೆ. ರಾಜ್ಯದ ಜನರ ಮೇಲ 95 ಸಾವಿರ ಕೋಟಿ ರೂ.ಗಳ ಸಾಲ ಹೊರಿಸಿರುವ ಇಂತಹ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

    ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿನ 187 ಕೋಟಿ ಭ್ರಷ್ಟಾಚಾರದ ಹಣ ನಿಗಮಕ್ಕೆ ವಾಪಸ್ ಬರದಿದ್ದರೆ ಲಕ್ಷಾಂತರ ಜನರು ಬೀದಿಗಿಳಿದು ಹೋರಾಟ ನಡೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ರಾಜೀನಾಮೆಗೆ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಕಾಂಗ್ರೆಸ್‌ಗೆ ಅಧಿಕಾರ ನಡೆಸಲು ಆಗಿದಿದ್ದರೆ ರಾಜೀನಾಮೆ ನೀಡಿ ಹೊರಗೆ ಬನ್ನಿ ಎಂದರು.
    ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ವಗ್ಗೆ ಮಾತನಾಡಿ, ದಲಿತರ ಅಭಿವೃದ್ಧಿಗೆ ಇಟ್ಟ ಅನುದಾನ ಬೇರೆ ಯೋಜನೆಗಳಿಗೆ ಬಳಿಸಿಕೊಂಡಿದ್ದಲ್ಲದೇ ಕೇಂದ್ರದಿಂದ ಬಂದ 83 ಕೋಟಿ ಹಣ ಲೆಕ್ಕವಿಲ್ಲ. ಪರಿಶಿಷ್ಟರ ಪಾಲಿಗೆ ಮೀಸಲಿರುವ ಅನುದಾನ ನೀಡದೆ ಹೋದರೆ ಎಸ್‌ಸಿ, ಎಸ್‌ಟಿ ಸಮುದಾಯದ ಜನರು ಬೀದಿಗಿಳಿದು ಹೋರಾಟ ನಡೆಸಿ ಹಣ ಮರಳಿ ಪಡೆಯುತ್ತೇವೆಂದು ಎಚ್ಚರಿಸಿದರು.
    ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ಮುಖಂಡರಾದ ವಿಜುಗೌಡ ಪಾಟೀಲ, ಉಮೇಶ ಕೋಳಕೂರ, ಕಾಸುಗೌಡ ಬಿರಾದಾರ, ಸಂಜೀವ ಐಹೊಳ್ಳಿ, ಮಳುಗೌಡ ಪಾಟೀಲ, ಸಾಬು ಮಾಶಾಳ, ಈರಣ್ಣ ರಾವೂರ, ಸಂಜಯ ಪಾಟೀಲ ಕನಮಡಿ, ಭೀಮಶಂಕರ ಹದನೂರು, ಅನಿಲ ಜಮಾದಾರ, ಚಿದಾನಂದ ಚಲವಾದಿ, ಸಪ್ನಾ ಕಣ್ಮುಚನಾಳ, ಪ್ರೇಮಾನಂದ ಬಿರಾದರ, ಸಿದ್ದು ಬುಳ್ಳ, ಕೃಷ್ಣ ಗುನಾಳಕರ, ವಿಜಯ ಜೋಶಿ, ಭರತ ಕೋಳಿ, ಶಿಲ್ಪ ಕುದುರಗೊಂಡ, ಪ್ರವೀಣ ನಾಟಿಕರ, ರಮೇಶ ಕೋಳಿ, ಗುರು ತಳವಾರ, ರಾಜು ಕೋಳಿ, ಪ್ರಶಾಂತ ಕದ್ದರಗಿ, ಗಿರಮಲ್ಲ ಕೋಳಿ, ಶರಣು ದಳವಾಯಿ, ರಮೇಶ ಕೋಳಿ, ಗುರು ತಳವಾರ, ರಾಜು ಕೋಳಿ, ಪ್ರಶಾಂತ ಕದ್ದರಗಿ ಮತ್ತಿತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts