More

    ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ: ಜಿಲ್ಲಾಧಿಕಾರಿ

    ಉಡುಪಿ: ಮಳೆಗಾಲದಲ್ಲಿ ಕಾಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಶನಿವಾರ ಜಿಪಂ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಜನಸಾಮಾನ್ಯರಿಗೆ ರೋಗರುಜಿನಗಳ ಬಗ್ಗೆ ಮುಂಜಾಗ್ರತೆ ವಹಿಸುವುದು, ಚಿಕಿತ್ಸೆ ಪಡೆಯುವ ವಿಧಾನ ಬಗ್ಗೆ ಆರೋಗ್ಯ ಶಿಕ್ಷಣ ನೀಡಬೇಕು. ಸಾಮಾನ್ಯವಾಗಿ ಹೆಚ್ಚು ರೋಗಗಳು ಸೊಳ್ಳೆಗಳ ಮೂಲಕ ಹರಡುತ್ತದೆ. ಇವುಗಳ ನಿಯಂತ್ರಣದ ಬಗ್ಗೆಯೂ ಪ್ರತಿಯೊಬ್ಬರಿಗೂ ಮಾಹಿತಿ ನೀಡಬೇಕು. ಕಾಲರಾ, ಟೈಫಾಯ್ಡ್​, ಅತಿಸಾರ ಬೇಧಿ, ಮಲೇರಿಯಾ, ಡೆಂಗ್ಯೂ, ಚಿಕನ್​ ಗುನ್ಯ, ಕಾಮಾಲೆ ರೋಗಗಳಿಗೆ ಮೂಲ ಕಾರಣ ನೀರು. ಮಳೆಯ ಕಲುಷಿತ ನೀರು, ಕುಡಿಯುವ ನೀರಿಗೆ ಬೆರೆತಾಗ ಕೆಲವು ರೋಗಗಳು ಬರುತ್ತವೆ. ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಉತ್ಪತ್ತಿ ತಾಣಾವಾಗುತ್ತವೆ. ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
    ಸಾಂಕ್ರಾಮಿಕ ರೋಗಗಳ ನಿವಾರಣೆಗೆ ಅಗತ್ಯವಿರುವ ಔಷಧಿ, ಲಸಿಕೆ, ವ್ಯಾಕ್ಸಿನೇಷನ್​ ಮತ್ತು ಕ್ಲೋರಿನೇಷನ್​ ಸಾಮಾಗ್ರಿಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಪ್ರವಾಹ ಸಂಭವನೀಯ ಪ್ರದೇಶಗಳ ಪಟ್ಟಿಮಾಡಿ ಆರ್​.ಆರ್​.ಟಿ ತಂಡಗಳನ್ನು ರಚಿಸಿ, ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಚಿಕಿತ್ಸೆ ನೀಡಲು ಸಿದ್ಧರಾಗಿರಬೇಕು. ಹಾಸ್ಟೆಲ್​, ಅಂಗನವಾಡಿಗಳಲ್ಲಿ ಜ್ವರ ರೋಗಗಳು ಬಂದಾಗ ನಿವಾರಣೆಗೆ ಕ್ರಮ ವಹಿಸಬೇಕು ಎಂದರು.
    ತಂಬಾಕು ಉತ್ಪನ್ನಗಳನ್ನು ಶಾಲಾ- ಕಾಲೇಜುಗಳ ಸುತ್ತ 100 ಮೀ ವ್ಯಾಪ್ತಿಯಲ್ಲಿ ಮಾರಾಟ ಮಾಡುವುದು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳ ಲೈಸೆನ್ಸ್​ ರದ್ದು ಪಡಿಸಲು ಸ್ಥಳಿಯ ಸಂಸ್ಥೆಗಳಿಗೆ ಸೂಚನೆ ನೀಡಿದರು. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಅನುಮತಿ ಪತ್ರ ಪಡೆಯಬೇಕೆಂಬ ಕಾನೂನು ಜಾರಿಗೆ ಬಂದಿದೆ ಇದನ್ನು ಅನುಷ್ಠಾನಗೊಳಿಸಬೇಕು ಎಂದರು.
    ಜಿಲ್ಲೆಯಲ್ಲಿ ಅನಧೀಕೃತವಾಗಿ ಸ್ಕಾ$ನಿಂಗ್​ ಸೆಂಟರ್​ ಭ್ರೂಣಲಿಂಗ ಪತ್ತೆ ಮಾಡುತ್ತಿರುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು. ಪ್ರಸಕ್ತ ಸಾಲಿನ ಈವರೆಗೆ 302 ಗರ್ಭಪಾತ ಪ್ರಕರಣಗಳಾಗಿವೆ. ಅವುಗಳಲ್ಲಿ 84 ಸ್ವಾಭಾವಿಕ ಗರ್ಭಪಾತವಾಗಿವೆ. ಕಾನೂನು ಬಾಹಿರವಾಗಿ ವೈದ್ಯರ ಸಲಹೆಗಳಿಲ್ಲದೇ ಭ್ರೂಣಪತ್ತೆಗಳು ನಡೆಯುತ್ತಿರುವ ಬಗ್ಗೆ ಎಚ್ಚರವಹಿಸಬೇಕು ಎಂದರು.
    ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 3 ತಾಯಿ-ಮರಣ ಪ್ರಕರಣಗಳಾಗಿವೆ. ಅವುಗಳಲ್ಲಿ 2 ಹೊರಜಿಲ್ಲೆಗಳ ಪ್ರಕರಣಗಳಿವೆ. ಬಾಣಂತಿಯರಿಗೆ ಪ್ರಾರಂಭದಿಂದಲೇ ತಾಯಿ ಕಾರ್ಡ್​ ವಿತರಿಸಿ, ನಿರಂತರ ಆರೋಗ್ಯ ತಪಾಸಣೆ ಮಾಡಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ ಮರಣಗಳು ಸಂಭವಿಸದಂತೆ ಎಚ್ಚರವಹಿಸಬೇಕು. ಮರಣ ಪ್ರಕರಣಗಳ ಬಗ್ಗೆ ಮರುದಿನವೇ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದರು.
    ಎಂಡೋಸಲ್ಫಾನ್​ ಬಾಧಿತರ ಆರೋಗ್ಯ ಸುಧಾರಣೆ ಹಾಗೂ ಪುನರ್ವಸತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಬೇಕು. ಅವರಿಗೆ ಮಾಸಾಶನ ನಿಗದಿತ ಅವಧಿಯಲ್ಲಿ ಪಾವತಿ ಆಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಬೈಂದೂರಿನ ನಾಡ ಗ್ರಾಮ ಪಂಚಾಯತ್​ನ ಸೇನಾಪುರ ಗ್ರಾಮದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನಿಮಾರ್ಣಕ್ಕಾಗಿ ಕ್ರಮವಹಿಸಬೇಕು. ಎಂಡೋ ಬಾಧಿತರಿರುವ ಪ್ರದೇಶಗಳ ಸಾರ್ವಜನಿಕ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಫಿ ಘಟಕಗಳನ್ನು ಪ್ರಾರಂಭಿಸಬೇಕು ಎಂದರು.
    ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಪ್ರಸ್ತುತ ಸಾಲಿನಲ್ಲಿ 7,536 ನಾಯಿ ಕಡಿತ ಪ್ರಕರಣಗಳು, 151 ಹಾವು ಕಡಿತ ಪ್ರಕರಣ ದಾಖಲಾಗಿದೆ. ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಮಣಿಪಾಲ ವ್ಯಾಪ್ತಿಯಲ್ಲಿ ಹೆಚ್ಚು ನಾಯಿ ಕಡಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು ಎಂದರು.
    ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 29,107 ಯೂನಿಟ್​ಗಳಷ್ಟು ರಕ್ತ ಸಂಗ್ರಹವಾಗಿದ್ದು, ಸಂಸ್ಥೆಗಳು ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದಲ್ಲಿ ನಿಯಮಾನುಸಾರ ಅನುಮತಿ ನೀಡಬೇಕೆಂದು ಸೂಚನೆ ನೀಡಿದರು.
    ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಂಪೌಂಡ್​ ಕಾಮಗಾರಿ ನರೇಗಾದಡಿ ಕೈಗೊಳ್ಳಲು ಹಾಗೂ ಕಟ್ಟಡದ ಇತರೆ ಅನುದಾನದಲ್ಲಿ ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್​ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts