More

    ಜು.02 ನಟ ಗಣೇಶ್ ಹುಟ್ಟುಹುಬ್ಬ; ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡ ಗೋಲ್ಡನ್ ಸ್ಟಾರ್​!

    ಬೆಂಗಳೂರು: ಸ್ಯಾಂಡಲ್​ವುಡ್​ ಅಂಗಳಕ್ಕೆ ‘ಮುಂಗಾರು ಮಳೆ’ ಸುರಿಸಿದ ನಟ ಗೋಲ್ಡನ್ ಸ್ಟಾರ್​ ಗಣೇಶ್​ ಅವರ ಜನ್ಮದಿನ ಇದೇ ಜುಲೈ 02ರಂದು ಇದ್ದು, ಈ ಬಾರಿ ತಮ್ಮ ಹುಟ್ಟುಹುಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಸ್ವತಃ ಅವರೇ ತಿಳಿಸಿದ್ದಾರೆ. ಈ ಬಗ್ಗೆ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿರುವ ಅವರು, ಮನೆಯ ಬಳಿ ಯಾರೂ ಬರಬೇಡಿ ಎಂದಿದ್ದಾರೆ.

    ಇದನ್ನೂ ಓದಿ: ಪೂರ್ವಜರ ನೈತಿಕ ಮೌಲ್ಯಗಳೇ ಸದ್ಯದ ಕಾನೂನುಗಳು

    ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿರುವುದಿಲ್ಲ. ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ, ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೇ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ್ ಎಂದು ಎಕ್ಸ್​ನಲ್ಲಿ (ಈ ಹಿಂದಿನ ಟ್ವಿಟರ್​) ಬರೆದುಕೊಂಡಿದ್ದಾರೆ.

    ತಮ್ಮ ನೆಚ್ಚಿನ ನಟನ ಸಂದೇಶ ನೋಡಿದ ಅಭಿಮಾನಿಗಳು ಬೇಸರಗೊಂಡಿದ್ದು, ಈ ಬಾರಿಯೂ ಗಣೇಶ್​ ತಮ್ಮೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ ಎಂಬುದನ್ನು ಅರಿತಿದ್ದಾರೆ.

    ರೋಹಿತ್, ವಿರಾಟ್ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ಮತ್ತೊಬ್ಬ ಸ್ಟಾರ್​ ಆಟಗಾರ ಗುಡ್​ಬೈ! ಫ್ಯಾನ್ಸ್ ಶಾಕ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts