More

    ನ್ಯಾಯ ಮೇಲುಗೈ ಸಾಧಿಸದಿದ್ರೆ, ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ದರ್ಶನ್, ಪ್ರಜ್ವಲ್​, ಸೂರಜ್​ ರೇವಣ್ಣ​ ಕೇಸ್​ ಬಗ್ಗೆ ನಟಿ ರಮ್ಯಾ ಖಡಕ್​ ರಿಯಾಕ್ಷನ್

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.  ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ.

    ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನು ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್​ ಕಳಿಸಿದ್ದ ಎನ್ನಲಾಗಿದೆ. ಆ ಕಾರಣದಿಂದ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರಹಿಂಸೆ ನೀಡಿ ಸಾಯಿಸಲಾಯಿತು ಎಂಬ ಆರೋಪ ದರ್ಶನ್​, ಪವಿತ್ರಾ ಗೌಡ ಹಾಗೂ ಸಹಚರರ ಮೇಲಿದೆ.

    ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಪವಿತ್ರಾ ಸೇರಿದಂತೆ 13 ಮಂದಿ ಜೈಲು ಸೇರಿದ್ದಾರೆ. ದರ್ಶನ ಸೇರಿದಂತೆ ನಾಲ್ವರು ಪೊಲೀಸ್​​ ಕಸ್ಟಡಿಯಲ್ಲಿ ವಿಚರಾಣೆ ಎದುರಿಸುತ್ತಿದ್ದಾರೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮಾತನಾಡಿರುವ ನಟಿ ರಮ್ಯಾ ರೇಣುಕಾಸ್ವಾಮಿ ಹತ್ಯೆ ಕುರಿತಂತೆ ನಟ ದರ್ಶನ್​ ಹಾಗೂ ಗ್ಯಾಂಗ್​ ನಡೆದುಕೊಂಡ ರೀತಿಗೆ ಕಿಡಿಕಾರಿದ್ದಾರೆ. ಕರ್ನಾಟಕದ ಕಾನೂನಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಟ್ವೀಟ್​​ ಮಾಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ತನಿಖೆ ಕೈಗೊಂಡ ದಿನದಿಂದಲೂ ರಮ್ಯಾ ಅವರು ಸೋಶಿಯಲ್​ ಮೀಡಿಯಾದಲ್ಲಿ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತುತ್ತಿದ್ದಾರೆ.

    ರಮ್ಯಾ ಮಾಡಿರುವ ಟ್ವೀಟ್​​ನಲ್ಲಿ ಏನಿದೆ?: ಸುದ್ದಿಯಲ್ಲಿರುವ ಕಾನೂನನ್ನು ಮುರಿಯುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಅವರ ಹಿಂಸಾತ್ಮಕ ಕ್ರಿಯೆಗಳ ಅಂತ್ಯದಲ್ಲಿ ಬಡವರು, ಮಹಿಳೆಯರು , ಮಕ್ಕಳು, ಕರ್ನಾಟಕದ ಜನಸಾಮಾನ್ಯರು. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ತೀರ್ಮಾನಕ್ಕೆ ತೆಗೆದುಕೊಂಡಾಗ ನಿಜವಾಗಿಯೂ ನ್ಯಾಯವನ್ನು ಮಾಡಲಾಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ಟ್ವೀಟ್​​ ಮಾಡಿದ್ದಾರೆ.

    ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

    ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

    ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದುವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಪೈಕಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದವರು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಆರೋಪಿಗಳಾದ ದರ್ಶನ್, ವಿನಯ್, ಧನರಾಜ್, ಪ್ರದೋಶ್‌ ಕಸ್ಟಡಿ ಅವಧಿ ಅಂತ್ಯವಾಗಲಿದ್ದು, ಕೋರ್ಟ್‌ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಪೊಲೀಸರು ತಯಾರಿ ನಡೆಸಿದ್ದಾರೆ.

    ದರ್ಶನ್ ಅಭಿಮಾನಿಗಳಿಗೆ ಅಣ್ಣ ಆದ್ರೂ ಪವಿತ್ರಾಗೌಡ ಅತ್ತಿಗೆ ಅಲ್ಲ; ದಾಖಲೆಯಲ್ಲಿ ರಿವೀಲಾಯ್ತು ಡಿ ಬಾಸ್​​​ ಲೈಫ್​​ ಸೀಕ್ರೆಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts