More

    ಮುಂದುವರಿದ ಪ್ರತಿಭಟನೆ

    ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಕೂಸಿನ ಮನೆ ರದ್ದುಮಾಡಿ, ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಎಲ್‌ಕೆಜಿ – ಯುಕೆಜಿ ಪ್ರಾರಂಭಿಸುವ ಆದೇಶ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಕೈಗೊಂಡಿರುವ ಹೋರಾಟ ಮುಂದುವರೆದಿದೆ.

    ಪ್ರತಿಭಟನೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರಿಂದ ಅಹವಾಲು ಸ್ವೀಕರಿಸಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ತಮ್ಮ ಬೆಂಬಲ ಇರುವುದಾಗಿ ತಿಳಿಸಿದ್ದರು. ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

    ಆದಾಗಿಯೂ ಕಾರ್ಯಕರ್ತೆಯರು ಹಗಲು ರಾತ್ರಿ ಪ್ರತಿಭಟನೆ ಮುಂದುವರೆಸಿದ್ದು, ಗುರುವಾರವೂ ಮುಂದುವರೆದಿದೆ. ‘‘ಸಚಿವರು ಮೌಖಿಕವಾಗಿ ಭರವಸೆ ನೀಡಿದರೆ ಒಪ್ಪಲಾಗದು. ನಮಗೆ ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ’’ ಎಂದು ಸಿಐಟಿಯು ರಾಜ್ಯಾಧ್ಯಕ್ಷ ವರಲಕ್ಷ್ಮೀ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts