More

    ಜ್ಞಾನದ ಬಳಕೆಯಿಂದ ಸಮಸ್ಯೆಗೆ ಪರಿಹಾರ : ಪಡುಕರೆ ಕಾಲೇಜಿನಲ್ಲಿ ವಾರ್ಷಿಕೋತ್ಸವದಲ್ಲಿ ಆನಂದ್ ಸಿ.ಕುಂದರ್ ಅಭಿಮತ

    ವಿಜಯವಾಣಿ ಸುದ್ದಿಜಾಲ ಕೋಟ

    ವಿದ್ಯಾರ್ಥಿಗಳು ತಾವು ಕಲಿತ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಪರಿಸರವನ್ನು ಪ್ರೀತಿಸಿ, ಹಸಿರೇ ಉಸಿರು ಎಂಬ ತತ್ವ ಅಳವಡಿಸಿಕೊಳ್ಳಬೇಕು ಎಂದು ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಪ್ರವರ್ತಕ ಆನಂದ್ ಸಿ.ಕುಂದರ್ ಕರೆ ನೀಡಿದರು.

    ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಉಪನ್ಯಾಸ ನೀಡಿದ ಲೇಖಕಿ ಡಾ.ಪಾರ್ವತಿ ಐತಾಳ್, ಪಠ್ಯಪುಸ್ತಕದಲ್ಲಿ ಪಡೆದ ಜ್ಞಾನದ ಕುರಿತು ಚಿಂತನೆ ಮಾಡುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿರಬೇಕು. ಅಂಕಗಳಿಗೆ ಮಹತ್ವ ಕೊಡುತ್ತಿರುವ ಈ ಸಮಾಜದಲ್ಲಿ ಜ್ಞಾನ, ಮೌಲ್ಯಗಳಿಗೆ ಪ್ರಾಮುಖ್ಯ ನೀಡುವ ಶಿಕ್ಷಣದ ಅವಶ್ಯಕತೆಯಿದೆ ಎಂದರು.

    ಪ್ರಾಂಶುಪಾಲೆ ಡಾ.ಸುನೀತಾ ವಿ. ವಾರ್ಷಿಕ ವರದಿ ಮಂಡಿಸಿದರು. 2022-23ರಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ 44 ವಿದ್ಯಾರ್ಥಿಗಳಿಗೆ ಮತ್ತು ಪ್ರಸ್ತುತ ತರಗತಿಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಹಾಗೂ ವಿಷಯವಾರು 100ರಲ್ಲಿ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ನಗದು ಬಹುಮಾನ ನೀಡಲಾಯಿತು. ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

    ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಫಾತಿಮಾ, ಸಿಂಚನಾ, ದೀಕ್ಷಿತಾ, ಮೇಘನಾ ಮತ್ತು ಸುದೀಪ್, ಕಾಲೇಜಿನ ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶಂಕರ ನಾಯ್ಕ ಬಿ. ಸ್ವಾಗತಿಸಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಮನೋಜ್ ಕುಮಾರ್ ಎಂ. ವಂದಿಸಿ, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜಣ್ಣ ಎಂ. ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts