More

    ಸೂರಜ್ ವಿರುದ್ಧ ಮತ್ತೊಂದು ದೂರು: ಸಲಿಂಗ ದೌರ್ಜನ್ಯದ ಆರೋಪ ಮಾಡಿ ಆಪ್ತನಿಂದಲೇ ದೂರು!

    ಹಾಸನ: ಸಲಿಂಗ ಕಾಮ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಎಂಎಲ್​ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಎರಡನೇ ದೂರು ದಾಖಲಾಗಿದೆ.

    ಇದನ್ನೂ ಓದಿ: ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ!

    ಈ ಮೊದಲು ದೂರು ನೀಡಿದ್ದ ಸಂತ್ರಸ್ತನ ವಿರುದ್ಧ ಬ್ಲ್ಯಾಕ್​ಮೇಲ್ ದೂರು ನೀಡಿದ್ದ ಶಿವಕುಮಾರ್ ನಾಲ್ಕು ವರ್ಷಗಳ ಹಿಂದೆ ಅಂದರೆ ಕೊರೊನಾ ಸಮಯದಲ್ಲಿ ನನ್ನ ಮೇಲು ಸೂರಜ್ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಮೊದಲನೇ ಸಂತ್ರಸ್ತನ ವಿರುದ್ಧ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದಾನೆ ಎಂದು ದೂರು ನೀಡಲು ಒತ್ತಡ ಹಾಕಿದ್ದರು. ಇವರ ಜೊತೆಯಲ್ಲಿ ರಕ್ಷಿತ್ ಮತ್ತು ಸಚಿನ್​ ಎಂಬುವರು ಕೂಡ ಸಹಕರಿಸುವ ಮೂಲಕ ನನಗೆ ಒತ್ತಡ ಹಾಕಿದ್ದರು ಎಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾನೆ.

    ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲೇ ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377,342,506 ಅಡಿ ಎಫ್​ಐಆರ್ ದಾಖಲಾಗಿದೆ. ಪೊಲೀಸ್ ಠಾಣೆ ಗೆ ದೂರು ನೀಡಿದ ಬಳಿಕ ಮಾತನಾಡಿದ ಸಂತ್ರಸ್ಥ, ‘ ನಾಲ್ಕು ವರ್ಷಗಳ ಹಿಂದೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ನನ್ನ ಮನಸ್ಸಿನಲ್ಲೆ ನೋವು ಇಟ್ಟುಕೊಂಡು ಸುಮ್ಮನಿದ್ದೆ. ಈಗ ಸಮಯ ಬಂದಿದೆ ದೂರು ಕೊಟ್ಟಿದ್ದೇನೆ ಎಂದಿದ್ದಾರೆ.

    ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎರಡನೇ ಕೇಸ್ ದಾಖಲಾಗಿದೆ. ಹೊಳೆನರಸೀಪುರ ತಾಲ್ಲೂಕು ಮೂಲದ ಯುವಕ ದೂರು ದಾಖಲಾಗಿದೆ. ಮೂರು ವರ್ಷಗಳ ಹಿಂದೆ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಂದು ಆರೋಪಿಸಿ ದೂರು ನೀಡಿದ್ದಾನೆ.

    ರಾಣೆಬೆನ್ನೂರು: ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts