More

    ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬೃಹತ್​ ಸೇತುವೆ

    ಪಾಟ್ನಾ: 12 ಕೋಟಿ ರೂ. ವೆಚ್ಚದಲ್ಲಿ ಬಿಹಾರದ ಅರಾರಿಯಾದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿದೆ. ಸೇತುವೆ ಕುಸಿದು ಬಿದ್ದಿರುವ ವೀಡಿಯೋವನ್ನು ಸಾರ್ವಜನಿಕರು ಸೆರೆಹಿಡಿದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಇದನ್ನೂ ಓದಿ: ಭಾರತದ 41ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ

    ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುವುದಕ್ಕಾಗಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು.

    ಸಿಕ್ತಿ ಶಾಸಕ ವಿಜಯ್ ಕುಮಾರ್ ಎಎನ್‌ಐಗೆ ಹೇಳಿಕೆ ನೀಡಿದ್ದು, ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಸೇತುವೆ ನಿರ್ಮಾಣಕ್ಕೆ ಕಡಿಮೆ ಬೆಲೆಯ ಸಾಮಗ್ರಿಗಳನ್ನು ಬಳಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಇನಾಯತ್ ಖಾನ್ ಭರವಸೆ ನೀಡಿದರು.‘

    ಅಲ್ಲದೇ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಈ ಘಟನೆ ತೀವ್ರ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ವರ್ಷ ಮಾರ್ಚ್‍ನಲ್ಲಿ ಬಿಹಾರದ ಸುಪೌಲ್‍ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಹಲವರು ಈ ವೇಳೆ ಸಿಲುಕಿಕೊಂಡಿದ್ದರು.

    “ನದಿಯ ಹರಿವು ಬದಲಾದ ನಂತರ ಸೇತುವೆಯ ಉಪಯುಕ್ತತೆ ಕಡಿಮೆಯಾಗಿದೆ. ಆದರೆ, ಜಿಲ್ಲಾಡಳಿತ ಈ ಘಟನೆಯನ್ನು ಗಮನಕ್ಕೆ ತಂದಿದೆ. ಗ್ರಾಮೀಣ ಕಾಮಗಾರಿ ಇಲಾಖೆಯ ಅಧಿಕಾರಿಗಳು ನಾಳೆ ಅರಾರಿಯಾಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಯು ನಾಯಕ ನೀರಜ್ ಕುಮಾರ್ ಹೇಳಿದ್ದಾರೆ.

    ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.: ಡಿಸಿಎಂ ಡಿ.ಕೆ.ಶಿವಕುಮಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts